ಚೇರಂಬಾಣೆ ಶ್ರೀ ರಾಜರಾಜೇಶ್ವರಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನಾಪೋಕ್ಲು: ಚೇರಂಬಾಣೆ ಶ್ರೀ ರಾಜರಾಜೇಶ್ವರಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಮಡಿಕೇರಿ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಟೇಬಲ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆದರು. ಚೇರಂಬಾಣೆ ಶ್ರೀ ರಾಜರಾಜೇಶ್ವರಿ ವಿದ್ಯಾರ್ಥಿಗಳಾದ ವರುಣಿಕ ಪಿ. ಎಂ., ಮೋಕ್ಷಿ ಕೆ. ಜೆ, ದಿಶಾ ಕೆ. ಡಿ ಹಾಗೂ ಅಹನಾ ಬಿ. ಜಿ. ಇವರುಗಳಿಗೆ ಶಿಕ್ಷಕಿ ಪಿ. ಸಿ. ರಾಧಿಕಾ ಮಾರ್ಗದರ್ಶನ ನೀಡಿದ್ದರು.