ಸಾರ್ವಜನಿಕ ಪ್ರಯಾಣಿಕರಿಗೆ ಮತ್ತಷ್ಟು ಆರಾಮದಾಯಕ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹುಬ್ಬಳ್ಳಿ -ಪುಣೆ- ಪಿಂಪ್ರಿ ನಡುವೆ ಪ್ರತಿದಿನ ನೂತನ ರಾಜರಥ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಹುಬ್ಬಳ್ಳಿ: ಸಾರ್ವಜನಿಕ ಪ್ರಯಾಣಿಕರಿಗೆ ಮತ್ತಷ್ಟು ಆರಾಮದಾಯಕ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹುಬ್ಬಳ್ಳಿ -ಪುಣೆ- ಪಿಂಪ್ರಿ ನಡುವೆ ಪ್ರತಿದಿನ ನೂತನ ರಾಜರಥ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿ, ಉಭಯ ರಾಜ್ಯಗಳ ನಡುವೆ ಪ್ರಯಾಣ ಮಾಡುವವರಿಗೆ ಅನುಕೂಲವಾಗುವಂತೆ ಸಾರ್ವಜನಿಕರ ಬೇಡಿಕೆಯ ಮೇರೆಗೆ ಈ ಬಸ್ ಸಂಚಾರ ಆರಂಭಿಸಲಾಗಿದೆ ಎಂದು ಹೇಳಿದರು.

ವೇಳಾ ಪಟ್ಟಿ

ಗೋಕುಲ ರಸ್ತೆ ಕೇಂದ್ರೀಯ ಬಸ್ ನಿಲ್ದಾಣದಿಂದ ಪ್ರತಿದಿನ ರಾತ್ರಿ 9.30ಕ್ಕೆ ಹೊರಡುತ್ತದೆ. ಹೊಸೂರು ಬಸ್ ನಿಲ್ದಾಣದಿಂದ 9.40ಕ್ಕೆ, ನವನಗರ 9.55, ಎಸ್.ಡಿ.ಎಂ. ಆಸ್ಪತ್ರೆ 10.05, ಧಾರವಾಡ ಹೊಸ ಬಸ್ ನಿಲ್ದಾಣದಿಂದ 10.15ಕ್ಕೆ ಹಾಗೂ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ 11.35ಕ್ಕೆ ಹೊರಡುತ್ತದೆ. ಕೊಲ್ಹಾಪುರಕ್ಕೆ ರಾತ್ರಿ1.35ಕ್ಕೆ, ಪುಣೆ ಸ್ವಾರಗೇಟ್ ಬಸ್ ನಿಲ್ದಾಣಕ್ಕೆ ಬೆಳಗ್ಗೆ 6ಕ್ಕೆ ಹಾಗೂ ಪಿಂಪ್ರಿಗೆ 6.30ಕ್ಕೆ ತಲುಪುತ್ತದೆ.

ಪಿಂಪ್ರಿ ಬಸ್ ನಿಲ್ದಾಣದಿಂದ ರಾತ್ರಿ 9.30ಕ್ಕೆ ಹಾಗೂ ಪುಣೆ ಸ್ವಾರಗೇಟ್ ಬಸ್ ನಿಲ್ದಾಣದಿಂದ 10.15ಕ್ಕೆ ಹೊರಡುತ್ತದೆ. ಬೆಳಗಾವಿಗೆ ಮರುದಿನ ಬೆಳಗ್ಗೆ 4.15, ಧಾರವಾಡಕ್ಕೆ 5.40 ಹಾಗೂ ಹುಬ್ಬಳ್ಳಿಗೆ 6.30ಕ್ಕೆ ಆಗಮಿಸುತ್ತದೆ.

ಅಪಘಾತ ಪರಿಹಾರ ವಿಮೆ, ಟೋಲ್ ಫೀ ಇತ್ಯಾದಿ ಸೇರಿದಂತೆ ಒಟ್ಟು ಪ್ರಯಾಣ ದರ ಹುಬ್ಬಳ್ಳಿಯಿಂದ ಪುಣೆಗೆ ₹1202 ಹಾಗೂ ಪಿಂಪ್ರಿಗೆ ₹1252 ನಿಗದಿಪಡಿಸಲಾಗಿದೆ.

ಮುಂಗಡ ಬುಕ್ಕಿಂಗ್, ರಿಯಾಯಿತಿ

ಸಾರ್ವಜನಿಕರು www.ksrtc.in ವೆಬ್ ಸೈಟ್, KSRTC Mobile App, ಹೊಸೂರು ಬಸ್ ನಿಲ್ದಾಣ, ಗೋಕುಲ ರಸ್ತೆ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ಇತರ ಪ್ರಮುಖ ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಬಹುದಾಗಿದೆ. ಒಂದೇ ಟಿಕೆಟ್‌ನಲ್ಲಿ 4 ಅಥವಾ ಹೆಚ್ಚು ಸೀಟುಗಳನ್ನು ಕಾಯ್ದಿರಿಸಿದರೆ ಪ್ರಯಾಣದರದಲ್ಲಿ ಶೇ. 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಹಾಗೂ ಹಿಂದಿರುಗುವ ಪ್ರಯಾಣಕ್ಕೆ ಒಂದೇ ಟಿಕೆಟ್ ಖರೀದಿಸಿದರೆ ಹಿಂದಿರುಗುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.