ವಾಣಿಜ್ಯ, ಉದ್ಯೋಗ, ವಿದ್ಯಾಭ್ಯಾಸ ಮತ್ತಿತರ ಕೆಲಸ ಕಾರ್ಯಗಳಿಗಾಗಿ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಮತ್ತು ಜಿಲ್ಲೆಯ ವಿವಿಧ ಸ್ಥಳಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹೈದರಾಬಾದ್ ಗೆ ಹೋಗಿ ಬರುತ್ತಾರೆ. ಅವರ ಅನುಕೂಲಕ್ಕಾಗಿ ಹುಬ್ಬಳ್ಳಿ ಹಾಗೂ ಹೈದರಾಬಾದ್ ನಡುವೆ ನೂತನ ರಾಜರಥ ಎಸಿ ಸ್ಲಿಪ್ಪರ್ ಬಸ್ ಸಂಚಾರ ಆರಂಭಿಸಲಾಗಿದೆ.

ಹುಬ್ಬಳ್ಳಿ:

ಹುಬ್ಬಳ್ಳಿ ಹಾಗೂ ಹೈದರಾಬಾದ್ ನಡುವೆ ನೂತನ ರಾಜರಥ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾ ಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿ, ವಾಣಿಜ್ಯ, ಉದ್ಯೋಗ, ವಿದ್ಯಾಭ್ಯಾಸ ಮತ್ತಿತರ ಕೆಲಸ ಕಾರ್ಯಗಳಿಗಾಗಿ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಮತ್ತು ಜಿಲ್ಲೆಯ ವಿವಿಧ ಸ್ಥಳಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹೈದರಾಬಾದ್ ಗೆ ಹೋಗಿ ಬರುತ್ತಾರೆ. ಅವರ ಅನುಕೂಲಕ್ಕಾಗಿ ಹುಬ್ಬಳ್ಳಿ ಹಾಗೂ ಹೈದರಾಬಾದ್ ನಡುವೆ ನೂತನ ರಾಜರಥ ಎಸಿ ಸ್ಲಿಪ್ಪರ್ ಬಸ್ ಸಂಚಾರ ಆರಂಭಿಸಲಾಗಿದೆ. ಗದಗ, ಕೊಪ್ಪಳ, ಗಂಗಾವತಿ, ರಾಯಚೂರು, ಝಡ್ ಚರ್ಲಾ, ಮೆಹಬೂಬ ನಗರ ಮೂಲಕ ಸಂಚರಿಸಲಿದೆ.

ವೇಳಾ ಪಟ್ಟಿ:

ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಪ್ರತಿದಿನ ಸಂಜೆ 7.30ಕ್ಕೆ ಹೊರಟು ಹೈದರಾಬಾದ್ ಮಹಾತ್ಮ ಗಾಂಧಿ ಬಸ್ ನಿಲ್ದಾಣಕ್ಕೆ ಮರುದಿನ ಬೆಳಗ್ಗೆ 7ಕ್ಕೆ ತಲುಪುತ್ತದೆ. ಹೈದರಾಬಾದ್ ಮಹಾತ್ಮ ಗಾಂಧಿ ಬಸ್ ನಿಲ್ದಾಣದಿಂದ ರಾತ್ರಿ 9.15ಕ್ಕೆ ಹೊರಟು ಬೆಳಗ್ಗೆ 8.15ಕ್ಕೆ ಹುಬ್ಬಳ್ಳಿ ಗೋಕುಲ ರಸ್ತೆ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಆಗಮಿಸುತ್ತದೆ. ಅಪಘಾತ ಪರಿಹಾರ ವಿಮೆ, ಟೋಲ್ ಫೀ ಇತ್ಯಾದಿ ಸೇರಿದಂತೆ ಒಟ್ಟು ಪ್ರಯಾಣ ದರ ₹1602 ನಿಗದಿಪಡಿಸಲಾಗಿದೆ. ಮುಂಗಡ ಬುಕ್ಕಿಂಗ್‌ ಮಾಡಲು www.ksrtc.in ವೆಬ್ ಸೈಟ್, KSRTC Mobile App, ಗೋಕುಲ ರಸ್ತೆ ಕೇಂದ್ರೀಯ ಬಸ್ ನಿಲ್ದಾಣ, ಹೊಸೂರು ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ಒಂದೇ ಟಿಕೆಟ್ ನಲ್ಲಿ 4 ಹಾಗೂ ಹೆಚ್ಚಿನ ಆಸನ ಕಾಯ್ದುರಿಸಿದರೆ ಪ್ರಯಾಣ ದರದಲ್ಲಿ ಶೇ. 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಹಿಂದಿರುವ ಪ್ರಯಾಣಕ್ಕೆ ಒಂದೇ ಟಿಕೆಟ್ ಪಡೆದುಕೊಂಡರೆ ಹಿಂದಿರುಗುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ: 7760991682, 7760991674 ಸಂಖ್ಯೆಗೆ ಸಂಪರ್ಕಿಸುವಂತೆ ತಿಳಿಸಿದ್ದಾರೆ.