ಬೆಲವತ್ತ ಗ್ರಾಪಂ ಉಪಾಧ್ಯಕ್ಷರಾಗಿ ರಾಜಶೇಖರ್ ಆಯ್ಕೆ

| Published : Jul 09 2025, 12:18 AM IST

ಸಾರಾಂಶ

ಬೆಲವತ್ತ ಗ್ರಾಪಂ ಉಪಾಧ್ಯಕ್ಷರಾಗಿ ರಾಜಶೇಖರ್ ಆಯ್ಕೆ

ಕನ್ನಡಪ್ರಭ ವಾರ್ತೆ ಗುಬ್ಬಿ

ತಾಲೂಕಿನ ಬೆಲವತ್ತ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ರಾಜಶೇಖರ್ ಅವಿರೋಧವಾಗಿ ಆಯ್ಕೆಯಾದರು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆ ಚುನಾವಣಾ ಅಧಿಕಾರಿ ಗುರುಪ್ರಸಾದ್ ನಡೆಸಿಕೊಟ್ಟರು. ನೂತನ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಜಶೇಖರ್ ಮಾತನಾಡಿ, ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿ ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ನೀಡುವ ಕೆಲಸವನ್ನು ಎಲ್ಲಾ ಸದಸ್ಯರ ವಿಶ್ವಾಸ ತೆಗೆದುಕೊಂಡು ಮಾಡುತ್ತೇನೆ. ಕುಡಿಯುವ ನೀರು, ಶೌಚಗೃಹ, ರಸ್ತೆ, ಬೀದಿ ದೀಪ ಸೇರಿದಂತೆ ವಸತಿ ಯೋಜನೆಗೆ ಅರ್ಹ ಫಲಾನುಭವಿಗಳ ಆಯ್ಕೆ ಮಾಡುತ್ತೇವೆ ಎಂದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲತಾ ದಯಾನಂದ, ಪಿಡಿಒ ಸಿದ್ದರಾಜು , ಲೆಕ್ಕ ಸಹಾಯಕ ಸಂದೀಪ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದರು.