ಲೋಕಸಭೆಗೆ ಕೇಂದ್ರ ಸಚಿವ ಆರ್‌ಸಿ ಸ್ಪರ್ಧೆ?

| Published : Feb 12 2024, 01:34 AM IST

ಸಾರಾಂಶ

ರಾಜ್ಯಸಭೆಯಿಂದ ಇನ್ನು ಕೆಲವೇ ದಿನಗಳಲ್ಲಿ ನಿವೃತ್ತರಾಗಲಿರುವ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ಗೆ ರಾಜ್ಯಸಭಾ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರು ಲೋಕಸಭೆಗೆ ಸ್ಪರ್ಧಿಸಬಹುದು ಎನ್ನಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರುಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರು ಬಯಸಿದರೆ ಅವರು ಲೋಕಸಭೆಗೆ ಸ್ಪರ್ಧೆ ಮಾಡುವ ಬಗ್ಗೆ ಒಲವು ಹೊಂದಿದ್ದಾರೆ ಎನ್ನಲಾಗಿದೆ.ಕನ್ನಡಪ್ರಭಕ್ಕೆ ನೀಡಿದ ಸಂದರ್ಶನದಲ್ಲಿ ರಾಜೀವ್‌ ಚಂದ್ರಶೇಖರ್‌ ಅವರೇ ಈ ಕುರಿತು ಸುಳಿವನ್ನೂ ನೀಡಿದ್ದಾರೆ.

ಆದರೆ, ಯಾವ ರಾಜ್ಯದಿಂದ ಸ್ಪರ್ಧೆ ಅಥವಾ ಯಾವ ಕ್ಷೇತ್ರದಿಂದ ಸ್ಪರ್ಧೆ ಎಂಬ ಬಗ್ಗೆ ಅವರು ಏನನ್ನೂ ಹೇಳಿಲ್ಲ.

ಸ್ಪರ್ಧಿಸುವುದೇ ಆದರೆ ಯಾವ ಕ್ಷೇತ್ರ ಎಂಬುದನ್ನು ಹೈಕಮಾಂಡ್‌ ನಿರ್ಧರಿಸುತ್ತದೆ ಎಂದಷ್ಟೇ ಹೇಳಿದ್ದಾರೆ.