ಚಿಕ್ಕಮಗಳೂರುಜಿಲ್ಲೆಯ ಎಲ್ಲಾ ಇಲಾಖೆಗಳು ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳ ನಿರ್ವಹಣೆ ಮಾಡಬೇಕು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿ ಪರಿಶೀಲನೆ ಸಭೆ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಜಿಲ್ಲೆಯ ಎಲ್ಲಾ ಇಲಾಖೆಗಳು ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳ ನಿರ್ವಹಣೆ ಮಾಡಬೇಕು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪಂಚಾಯತ್ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ ಎಲ್ಲಾ ಕಚೇರಿಗಳಲ್ಲೂ ಇ-ಆಫೀಸ್ ಅನುಷ್ಠಾನಕ್ಕೆ ಒತ್ತು ಕೊಡಲಾಗುತ್ತಿದೆಯಾದರೂ ನಿರೀಕ್ಷಿತ ಗುರಿ ಮುಟ್ಟಿಲ್ಲ. ಇಲಾಖೆಗಳು ತುರ್ತಾಗಿ ಇ-ಆಫೀಸ್ ತಂತ್ರಾಂಶ ಅನುಷ್ಠಾನಗೊಳಿಸಿ ಕಡ್ಡಾಯವಾಗಿ ಕಡತ ನಿರ್ವಹಣೆಯನ್ನು ಅದೇ ತಂತ್ರಾಂಶ ದ ಮೂಲಕ ನಿರ್ವಹಿಸುವಂತೆ ಹೇಳಿದರು. ಇನ್ನು ಒಂದು ವಾರದಲ್ಲಿ ಇ-ಆಫೀಸ್ನಲ್ಲಿ ಎಷ್ಟು ಅರ್ಜಿಗಳು ಕ್ರಿಯೇಟ್ ಆಗಿವೆ ಎಂಬ ಮಾಹಿತಿ ನೀಡುವಂತೆ ತಿಳಿಸಿದರು.ಎಲ್ಲ ಕಚೇರಿಗಳಲ್ಲಿ ಉಪಯೋಗಕ್ಕೆ ಬಾರದ ಹಳೆ ಪೀಠೋಪಕರಣಗಳು ಹಾಗೂ ಇನ್ನಿತರೆ ವಸ್ತುಗಳ ವಿಲೇವಾರಿ ಮಾಡಿ ಕಚೇರಿ ಯನ್ನು ಸ್ವಚ್ಛವಾಗಿರಿಸಿಕೊಳ್ಳುವಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.ವಿದ್ಯಾರ್ಥಿ ನಿಲಯಗಳಲ್ಲಿ ಬಿಸಿ ನೀರಿನ ಜೊತೆಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿ ಅವರ ವ್ಯಾಸಂಗಕ್ಕೆ ಅನುಕೂಲ ಮಾಡಿ ಕೊಡಬೇಕು. ನಗರ ಪ್ರದೇಶದ ವಿದ್ಯಾರ್ಥಿ ನಿಲಯಗಳಲ್ಲಿ ಹೊರಗಿನವರು ಬರುವುದನ್ನು ನಿಲ್ಲಿಸಬೇಕು ಹಾಗೂ ಪ್ರತಿ ಹಾಸ್ಟೆಲ್ಗಳಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಜಿಲ್ಲೆಯಲ್ಲಿ ಸರ್ವೇ ಕಾರ್ಯ ನಡೆಸಿ ಕೆರೆಗಳ ಒತ್ತುವರಿ ತೆರವುಗೊಳಿಸುವಂತೆ ಈಗಾಗಲೇ ಹಲವು ಬಾರಿ ಸೂಚಿಸಿದ್ದರೂ ಈವರೆಗೂ ಸಂಪೂರ್ಣವಾಗಿ ತೆರವಿಗೆ ಕ್ರಮ ಕೈಗೊಂಡಿಲ್ಲ. ಅಂತಹ ಕೆರೆಗಳನ್ನು ಕೂಡಲೇ ತೆರವುಗೊಳಿಸುವಂತೆ ತಿಳಿಸಿದರು.
ಎಲ್ಲಾ ಕೆರೆಗಳ ನೀರು ಶೇಖರಣೆ ಸಾಮರ್ಥ್ಯವನ್ನು ಪರಿಶೀಲಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಇದ್ದರು.ಫೋಟೋಜಿಲ್ಲಾ ಪಂಚಾಯತ್ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಜಿಲ್ಲೆಯ ಸಮಗ್ರ ಅಭಿವೃದ್ಧಿ ಪರಿಶೀಲನೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಇದ್ದರು.