ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರನ್ನು ಎರಡು ಗಂಟೆಗೂ ಹೆಚ್ಚು ಕಾಲ ಭೇಟಿಯಾಗಿ ರಾಜಕೀಯ ಹಾಗೂ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚಿಸಲಾಗಿದೆ. ಆದರೆ ಈ ಭೇಟಿಗೆ ರಾಜಕೀಯ ಬಣ್ಣ ಕಟ್ಟುವ ಅಗತ್ಯವಿಲ್ಲ. ತಾವು ಕಾಂಗ್ರೆಸ್ನಲ್ಲಿಯೇ ಮುಂದುವರಿಯಲಿದ್ದು, ಸದ್ಯಕ್ಕೆ ಪಕ್ಷ ಬದಲಿಸುವ ಯಾವುದೇ ಆಲೋಚನೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಸ್ಪಷ್ಟಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಹಾಸನಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರನ್ನು ಎರಡು ಗಂಟೆಗೂ ಹೆಚ್ಚು ಕಾಲ ಭೇಟಿಯಾಗಿ ರಾಜಕೀಯ ಹಾಗೂ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚಿಸಲಾಗಿದೆ. ಆದರೆ ಈ ಭೇಟಿಗೆ ರಾಜಕೀಯ ಬಣ್ಣ ಕಟ್ಟುವ ಅಗತ್ಯವಿಲ್ಲ. ತಾವು ಕಾಂಗ್ರೆಸ್ನಲ್ಲಿಯೇ ಮುಂದುವರಿಯಲಿದ್ದು, ಸದ್ಯಕ್ಕೆ ಪಕ್ಷ ಬದಲಿಸುವ ಯಾವುದೇ ಆಲೋಚನೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಸ್ಪಷ್ಟಪಡಿಸಿದ್ದಾರೆ.ಶನಿವಾರ ಹಾಸನಾಂಬೆ ದೇವಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ನಿಜ. ಅದರಲ್ಲಿ ಮುಚ್ಚಿಡುವಂಥದ್ದೇನೂ ಇಲ್ಲ. ರಾಜಕೀಯವಾಗಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ್ದೇನೆ. ನಮ್ಮ ಜಿಲ್ಲೆ ಹಾಗೂ ತಾಲ್ಲೂಕಿಗೆ ಕೈಗಾರಿಕೆಗಳನ್ನು ತರಬೇಕು ಎಂಬ ಉದ್ದೇಶದಿಂದಲೂ ಮಾತುಕತೆ ನಡೆಸಿದ್ದೇನೆ. ಆದರೆ ನಾನು ಜೆಡಿಎಸ್ ಸೇರುತ್ತೇನೆ ಎಂದು ಕುಮಾರಸ್ವಾಮಿ ಅವರಾಗಲಿ, ನಾನಾಗಲಿ ಎಲ್ಲಿಯೂ ಹೇಳಿಲ್ಲ. ನನ್ನ ಅಧಿಕಾರಾವಧಿಯಲ್ಲಿ ಇನ್ನೂ ೧೮ ತಿಂಗಳು ಬಾಕಿಯಿದ್ದು, ಸದ್ಯಕ್ಕೆ ಪಕ್ಷ ಬದಲಿಸುವ ಪ್ರಶ್ನೆಯೇ ಇಲ್ಲ. ನಾನು ಕಾಂಗ್ರೆಸ್ನಲ್ಲಿಯೇ ಇದ್ದೇನೆ ಎಂದು ಸ್ಪಷ್ಟಪಡಿಸಿದರು.
ಸಚಿವ ಬಾಲಕೃಷ್ಣ ಅವರು ರಾಜಣ್ಣ ಅವರ ಕುರಿತು ಮಾಡುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ರಾಜೇಂದ್ರ, ಸಚಿವರಾದ ಬಳಿಕ ರಾಜಣ್ಣ ಅವರ ಬಗ್ಗೆ ಮಾತನಾಡುತ್ತಿದ್ದಾರೆ. ಬಹುಶಃ ರಾಜಣ್ಣ ಅವರ ವಿರುದ್ಧ ಮಾತನಾಡಿದರೆ ಮುಖ್ಯಮಂತ್ರಿಗಳ ಬಳಿ ಏನಾದರೂ ಅನುಕೂಲ ಸಿಗಬಹುದು ಎಂಬ ನಿರೀಕ್ಷೆ ಅವರಿಗಿರಬಹುದು. ರಾಜಣ್ಣ ಅವರ ಬಗ್ಗೆ ಮಾತನಾಡಿದವರಿಗೆ ಬಹುಮಾನ ಇಟ್ಟಿರಬೇಕು ಎಂದು ವ್ಯಂಗ್ಯವಾಡಿದರು. ಸಚಿವರಾಗಿರುವುದರಿಂದ ಅವರ ಬಗ್ಗೆ ಹೆಚ್ಚು ಅಗೌರವವಾಗಿ ಮಾತನಾಡಲು ಹೋಗುವುದಿಲ್ಲ. ಆದರೆ ರಾಜಣ್ಣ ಅವರಿಂದಲೇ ಚುನಾವಣೆಯಲ್ಲಿ ಸೋಲು-ಗೆಲುವು ನಿರ್ಧಾರವಾಗುತ್ತದೆ ಎಂಬ ಆರೋಪ ಸರಿಯಲ್ಲ. ಪುಟ್ಟಣ್ಣ ಅವರು ಸೋಲುವುದಿಲ್ಲ ಎಂಬ ವಾತಾವರಣವಿದ್ದರೂ ಏಕೆ ಸೋತರು? ಆಗ ೩೬ ಶಾಸಕರಿದ್ದರು, ಅವರೆಲ್ಲ ಏನು ಮಾಡುತ್ತಿದ್ದರು? ಸೋತಾಗ ಮಾತ್ರ ರಾಜಣ್ಣ ಕಾರಣ ಎಂದು ಹೇಳುವುದು, ಗೆದ್ದಾಗ ಅವರ ಪಾತ್ರವನ್ನೇ ಗುರುತಿಸದಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದು ಎಷ್ಟೋ ವರ್ಷಗಳಾಗಿತ್ತು? ಸಂಸದ ಶ್ರೇಯಸ್ಪಟೇಲ್ ಅವರಿಗೆ ಟಿಕೆಟ್ ಕೊಡಿಸುವುದರಿಂದ ಹಿಡಿದು ಚುನಾವಣೆಯ ಜವಾಬ್ದಾರಿ ನಿರ್ವಹಿಸುವವರೆಗೆ ರಾಜಣ್ಣ ಅವರ ಪಾತ್ರವೂ ಪ್ರಮುಖವಾಗಿತ್ತು. ಒಬ್ಬರೇ ಗೆಲ್ಲಿಸಿದ್ದಾರೆ ಎಂದು ಹೇಳುವುದಿಲ್ಲ. ಆದರೆ ಗೆಲುವಿನಲ್ಲಿ ಅವರ ಕೊಡುಗೆ ಹೆಚ್ಚಿದೆ. ಹೀಗಿರುವಾಗ ಸುಮ್ಮನೆ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು. ರಾಜಣ್ಣ ಅವರ ಕುರಿತು ಇನ್ನೂ ಹಲವು ವಿಚಾರಗಳಿವೆ. ಸಂದರ್ಭ ಬಂದಾಗ ಯಾರು ಏನೇನು ಮಾತನಾಡಿದ್ದಾರೆ, ಏನೇನು ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸುತ್ತೇನೆ ಎಂದರು. ಎಸ್ಐಆರ್ ಪ್ರಕ್ರಿಯೆ ಕುರಿತು ಮಾತನಾಡಿದ ಅವರು, ರಾಜಣ್ಣ ಅವರು ಈ ಹಿಂದೆ ವ್ಯಕ್ತಪಡಿಸಿದ್ದ ಅಭಿಪ್ರಾಯದ ಆಧಾರದಲ್ಲಿಯೇ ಈಗ ಎಸ್ಐಆರ್ ನಡೆಯುತ್ತಿದೆ. ನೇರವಾಗಿ ಮಾತನಾಡುವ ಸ್ವಭಾವ ರಾಜಣ್ಣ ಅವರದ್ದು. ಅದನ್ನು ಬದಲಾಯಿಸಿಕೊಳ್ಳಿ ಎಂದು ಹೇಳಲು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಅವರನ್ನು ಸಚಿವ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂಬ ಅಭಿಪ್ರಾಯವೂ ಇದೆ. ರಾಜಣ್ಣ ಅವರ ಬಗ್ಗೆ ಕೆಲವರಿಗೆ ಭಯವಿರಬಹುದು. ಹಾಗಾಗಿ ಇಂತಹ ಬೆಳವಣಿಗೆಗಳು ನಡೆಯುತ್ತಿವೆ. ಇದೇ ವಿಚಾರವಾಗಿ ಬೇರೆ ನಾಯಕರೂ ಮಾತನಾಡಿದ್ದರೂ ಅವರ ವಿರುದ್ಧ ಏಕೆ ಕ್ರಮವಾಗುತ್ತಿಲ್ಲ ಎಂದು ಪ್ರಶ್ನಿಸಿದರು. ಇತ್ತೀಚಿನ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಸಹಜವಾಗಿಯೇ ಸರ್ಕಾರದ ಮೇಲೆ ಒತ್ತಡ ಹಾಗೂ ಹಿನ್ನಡೆ ಉಂಟುಮಾಡಿದೆ. ಕಳೆದ ಬಾರಿ ಪುಟ್ಟಣ್ಣ ಅವರು ಕಾಂಗ್ರೆಸ್ನಿಂದ ಒಬ್ಬರೇ ಗೆದ್ದಿದ್ದರು. ಮೂರು ಸ್ಥಾನಗಳು ಬಿಜೆಪಿಗೆ ಹೋಗಿದ್ದವು. ಈ ಬಾರಿ ಕಾಂಗ್ರೆಸ್ಗೆ ಲಭ್ಯವಿದ್ದ ಒಂದು ಸ್ಥಾನವನ್ನೂ ಕಳೆದುಕೊಂಡಿದ್ದೇವೆ. ಅಧಿಕಾರದಲ್ಲಿರುವ ಸರ್ಕಾರಕ್ಕೆ ಇಂತಹ ಫಲಿತಾಂಶ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವನ್ನು ಸೂಚಿಸುತ್ತದೆ ಎಂದರು. ಆದರೆ ಚುನಾವಣಾ ಪ್ರಕ್ರಿಯೆ ಇನ್ನೂ ಮುಗಿದಿಲ್ಲ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆ ಚುನಾವಣೆಗಳು ಎದುರಾಗಲಿವೆ. ಈ ಚುನಾವಣೆಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.