೬, ೭ಕ್ಕೆ ರಾಜೇಂದ್ರಶ್ರೀ ೧೦೯ನೇ ಜಯಂತಿ: ಶಾಸಕ ಎ.ಆರ್.ಕೃಷ್ಣಮೂರ್ತಿ

| Published : Dec 04 2024, 12:32 AM IST

ಸಾರಾಂಶ

ಸಂಘ ಸಂಸ್ಥೆಗಳು, ಭಕ್ತವೃಂದ ಹಾಗೂ ಕೊಳ್ಳೇಗಾಲ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಕೊಳ್ಳೇಗಾಲದಲ್ಲಿ ಹಮ್ಮಿಕೊಂಡಿರುವ ಡಾ.ಶಿವರಾತ್ರಿರಾಜೇಂದ್ರ ಶ್ರೀಗಳ ೧೦೯ನೇ ಜಯಂತಿ ಸಮಾರಂಭವು ಡಿ.೬ ಮತ್ತು ೭ರಂದು ಅದ್ಧೂರಿಯಿಂದ ನಡೆಯಲಿದ್ದು, ಡಿ.೭ರಂದು ನಡೆಯುವ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸಂಘ ಸಂಸ್ಥೆಗಳು, ಭಕ್ತವೃಂದ ಹಾಗೂ ಕೊಳ್ಳೇಗಾಲ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಕೊಳ್ಳೇಗಾಲದಲ್ಲಿ ಹಮ್ಮಿಕೊಂಡಿರುವ ಡಾ.ಶಿವರಾತ್ರಿರಾಜೇಂದ್ರ ಶ್ರೀಗಳ ೧೦೯ನೇ ಜಯಂತಿ ಸಮಾರಂಭವು ಡಿ.೬ ಮತ್ತು ೭ರಂದು ಅದ್ಧೂರಿಯಿಂದ ನಡೆಯಲಿದ್ದು, ಡಿ.೭ರಂದು ನಡೆಯುವ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘ ಸಂಸ್ಥೆಗಳು, ಭಕ್ತವೃಂದ ಹಾಗೂ ಕೊಳ್ಳೇಗಾಲ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳು ಹಾಗೂ ದಾನಿಗಳ ಸಹಾಯದಿಂದ ಈ ಅದ್ಧೂರಿ ಸಮಾರಂಭ ಹಮ್ಮಿಕೊಂಡಿದ್ದು ಡಿ. ೭ರಂದು ಮಧ್ಯಾಹ್ನ ೧೨ಕ್ಕೆ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಸಮಾರಂಭ ನಡೆಯಲಿದೆ ಎಂದರು.ಸಾಲೂರು ಮಠದ ಡಾ.ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಹನೂರು ಮತ್ತು ಕೊಳ್ಳೇಗಾಲ ಭಾಗದ ಮಠಾಧೀಶರು ಉಪಸ್ಥಿತರಿರಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದು, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಭಾವಚಿತ್ರ ಅನಾವರಣ ಮಾಡಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಣ್ಣು ವಿತರಿಸಲಿದ್ದಾರೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಭಾ ಪುರಸ್ಕಾರ ಮಾಡಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಸಂಸದ ಸುನೀಲ್ ಬೋಸ್, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎಂ.ಆರ್.ಮಂಜುನಾಥ್, ಎಚ್ ಎಂ. ಗಣೇಶ್‌ಪ್ರಸಾದ್, ಅಭಾವೀಲಿ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಮಹದೇವ ಬಿದರಿ, ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಗ್ಯಾರಂಟಿಗಳ ಯೋಜನೆಗಳ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ಭಾಗವಹಿಸಲಿದ್ದಾರೆ ಎಂದರು. ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕರಾದ ಎಸ್. ಬಾಲರಾಜ್, ಪರಿಮಳ ನಾಗಪ್ಪ ಜಿ.ಎನ್. ನಂಜುಂಡಸ್ವಾಮಿ, ಚಾಮುಲ್ ಅಧ್ಯಕ್ಷ ವೈ.ಸಿ. ನಾಗೇಂದ್ರ, ನಗರಸಭೆ ಅಧ್ಯಕ್ಷೆ ರೇಖಾ ರಮೇಶ್, ಉಪಾಧ್ಯಕ್ಷ ಎ.ಪಿ.ಶಂಕರ್ ಉಪಸ್ಥಿತರಿರುತ್ತಾರೆ ಎಂದರು.

ಡಿ.೭ ರಂದು ಬೆಳಗ್ಗೆ ೮.೩೦ ಕ್ಕೆರಾಜೇಂದ್ರ ಶ್ರೀಗಳವರ ಭಾವಚಿತ್ರ ಮೆರವಣಿಗೆಯು ವಿವಿಧ ಕಲಾತಂಡಗಳೊಂದಿಗೆ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಆವರಣದಿಂದ ಹೊರಟು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಡಾ. ರಾಜ್‌ಕುಮಾರ್ ರಸ್ತೆಯಲ್ಲಿ ಸಾಗಿ ನ್ಯಾಷನಲ್ ಸ್ಕೂಲ್ ಆವರಣದ ಸಭಾಮಂಟಪ ತಲುಪುವುದು ಎಂದರು.ಬೆಳಗ್ಗೆ ೯.೩೦೦ಕ್ಕೆ ವಿದೂಷಿ ಅನನ್ಯ ಭಟ್ ಮತ್ತು ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ, ಮಧ್ಯಾಹ್ನ ೨.೩೦ಕ್ಕೆ ಸುತ್ತೂರು ಶ್ರೀಮಠ - ಗುರುಪರಂಪರೆ (ಅನಿಮೇಷನ್ ಚಿತ್ರಪ್ರದರ್ಶನ) ೬.೩೦ಕ್ಕೆ ’ಕಾಯಕ ತಪಸ್ವಿ’: ದೃಶ್ಯ-ನಾಟ್ಯ-ಸಂಗಮ ನಡೆಯಲಿದೆ. ಡಿ.೬ ಬೆಳಗ್ಗೆ ೯ಕ್ಕೆ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ ನಡೆಯಲಿದ್ದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಎ.ಆರ್‌. ಕೃಷ್ಣಮೂರ್ತಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಎಂ.ಆರ್. ಮಂಜುನಾಥ್, ವಿಶೇಷ ಆಹ್ವಾನಿತರಾಗಿ ಎಸ್ಪಿ. ಡಾ. ಬಿ. ಕವಿತಾ, ಜಿಪಂ ಸಿಇಒ ಮೋನಾ ರೋತ್, ಡಿಎಚ್‌ಒ ಡಾ.ಎಸ್.ಚಿದಂಬರ, ಉದ್ಯಮಿ ಎಸ್. ನಿಶಾಂತ್, ಮಾನಸ ಶಿಕ್ಷಣ ಸಂಸ್ಥೆಯ ಡಾ.ಎಸ್.ದತ್ತೇಶ್‌ಕುಮಾರ್ ಭಾಗವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪಿ.ಮರಿಸ್ವಾಮಿ, ಉದ್ಯಮಿ ಎಸ್.ನಿಶಾಂತ್, ಪುಟ್ಟಣ್ಣ, ತೋಂಟೇಶ್,ವೀರಭದ್ರ, ರಾಜಗುರು ಇದ್ದರು.