ರಾಜಘಟ್ಟ ಡೇರಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

| Published : Mar 17 2024, 01:48 AM IST

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆದಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ದೊಡ್ಡಬಳ್ಳಾಪುರ: ತಾಲೂಕಿನ ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆದಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಚುನಾವಣೆ ಪ್ರಕ್ರಿಯೆಯಲ್ಲಿ ನೂತನ ಅಧ್ಯಕ್ಷರಾಗಿ ಬಿ.ಎಸ್.ಸುರೇಶ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ರತ್ನಮ್ಮ ಸಂಜೀವಪ್ಪ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ತಾಪಂ ಮಾಜಿ ಅಧ್ಯಕ್ಷ ಕೋಡಿ ನರಸಿಂಹಮೂರ್ತಿ, ಮಾಜಿ ಸದಸ್ಯ ವೆಂಕಟರಮಣಪ್ಪ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರಾದ ಆರ್.ಎ.ಹರೀಶ್, ಗ್ರಾಪಂ ಅಧ್ಯಕ್ಷ ಆರ್.ಜಿ.ಮುನಿರಾಜು, ಉಪಾಧ್ಯಕ್ಷೆ ಬಿ.ಎಸ್.ಸುಜಾತ ಹನುಮಂತರಾಯಪ್ಪ, ಸದಸ್ಯರಾದ ಆನಂದ್, ಎ.ಶಿವಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷರಾದ ಆರ್.ಸಿ.ಶಿವಕುಮಾರ್, ಆರ್.ಎ.ರವೀಶ್, ಮಾಜಿ ಸದಸ್ಯರಾದ ಬಿ.ಎಸ್.ಹರೀಶ್, ಕೆಂಪೇಗೌಡ ಮತ್ತಿತರರು ಅಭಿನಂದಿಸಿದರು.