ಮೊಬೈಲ್ ಕ್ರಾಂತಿಗೆ ಮುನ್ನುಡಿ ಬರೆದ ರಾಜೀವ್‌ಗಾಂಧಿ: ಶುಭದಾಯಿನಿ

| Published : Aug 31 2025, 01:09 AM IST

ಮೊಬೈಲ್ ಕ್ರಾಂತಿಗೆ ಮುನ್ನುಡಿ ಬರೆದ ರಾಜೀವ್‌ಗಾಂಧಿ: ಶುಭದಾಯಿನಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜೀವ್ ಗಾಂಧಿ ಅವರು ಅತಿ ಕಿರಿಯ ವಯಸ್ಸಿನಲ್ಲಿ ಪ್ರಧಾನ ಮಂತ್ರಿ ಹುದ್ದೆಗೇರಿದರು. ೧೮ ವರ್ಷ ತುಂಬಿದವರಿಗೆ ಮತದಾನದ ಹಕ್ಕು ನೀಡಿದರು. ಉನ್ನತ ಶಿಕ್ಷಣಕ್ಕೆ ಮಹತ್ವ ನೀಡಿ ಅನೇಕ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದರು, ಪಂಚಾಯತ್ ರಾಜ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿದರು. ವಿಜ್ಞಾನ- ತಂತ್ರಜ್ಞಾನ ಮತ್ತು ಸಂಬಂಧಿತ ಕೈಗಾರಿಕೆಗಳಿಗೆ ಸರ್ಕಾರದ ಬೆಂಬಲವನ್ನು ಹೆಚ್ಚಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ದೇಶದಲ್ಲಿ ಮೊಬೈಲ್ ಕ್ರಾಂತಿಗೆ ಮೊಟ್ಟಮೊದಲಿಗೆ ಮುನ್ನುಡಿ ಬರೆದವರು ಮಾಜಿ ಪ್ರಧಾನಿ ರಾಜೀವ್‌ಗಾಂಧಿ. ಅವರು ಭಾರತವನ್ನು ಶಕ್ತಿಶಾಲಿ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪ ಮಾಡಿದ್ದರು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಚ್.ಬಿ.ಶುಭದಾಯಿನಿ ಹೇಳಿದರು

ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಗಿರಿಜಾ ಸ್ಲಂ ಅಂಗನವಾಡಿಯಲ್ಲಿ ಕೇಕ್ ಕಟ್ ಮಾಡಿ ಹಾಗೂ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ಕೊಡುವ ಮುಖೇನ ಜನ್ಮದಿನ ಆಚರಿಸಿ ಮಾತನಾಡಿದರು.

ರಾಜೀವ್ ಗಾಂಧಿ ಅವರು ಅತಿ ಕಿರಿಯ ವಯಸ್ಸಿನಲ್ಲಿ ಪ್ರಧಾನ ಮಂತ್ರಿ ಹುದ್ದೆಗೇರಿದರು. ೧೮ ವರ್ಷ ತುಂಬಿದವರಿಗೆ ಮತದಾನದ ಹಕ್ಕು ನೀಡಿದರು. ಉನ್ನತ ಶಿಕ್ಷಣಕ್ಕೆ ಮಹತ್ವ ನೀಡಿ ಅನೇಕ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದರು, ಪಂಚಾಯತ್ ರಾಜ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿದರು. ವಿಜ್ಞಾನ- ತಂತ್ರಜ್ಞಾನ ಮತ್ತು ಸಂಬಂಧಿತ ಕೈಗಾರಿಕೆಗಳಿಗೆ ಸರ್ಕಾರದ ಬೆಂಬಲವನ್ನು ಹೆಚ್ಚಿಸಿದರು ಎಂದು ತಿಳಿಸಿದರು.

ಮಾಹಿತಿ ತಂತ್ರಜ್ಞಾನ ಮತ್ತು ಇಂಟರ್ನೆಟ್ ವ್ಯವಸ್ಥೆಯಲ್ಲಿ ಕ್ರಾಂತಿ ತಂದು ಭವ್ಯ ಭಾರತ ನಿರ್ಮಾಣವನ್ನು ಸಾಕಾರಗೊಳಿಸಿದ ಕೀರ್ತಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ. ಅವರ ಆಡಳಿತ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ಯುವಕರನ್ನು ದೇಶದ ಶಕ್ತಿಯನ್ನಾಗಿ ಮಾಡುವ ಕನಸು ಕಂಡಿದ್ದರು ಎಂದರು.

ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಮುಖಂಡರಾದ ಜ್ಯೋತಿ, ಸುನೀತಾ, ಹನ್ಸಿಯಾಬಾನು, ಶಕುಂತಲಾ, ಸರ್ವಮಂಗಳ, ಗುಣಲಕ್ಷ್ಮೀ, ಅನುರಾಧಾ, ಪದ್ಮ, ಗೀತಾ, ಸುವರ್ಣಾವತಿ, ಜಯಲಕ್ಷ್ಮೀ, ರೇವತಿ, ರಾಜಮ್ಮ, ಇತರರಿದ್ದರು.

ಆ.31ರಂದು ದೇವಮ್ಮ ಇಂಡುವಾಳು ಹೊನ್ನಯ್ಯ, ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ ಪ್ರದಾನ

ಕನ್ನಡಪ್ರಭ ವಾರ್ತೆ ಮಂಡ್ಯ

28ನೇ ವರ್ಷದ ದೇವಮ್ಮ ಇಂಡುವಾಳು ಹೊನ್ನಯ್ಯ, ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ, ಎಚ್. ಶಾರದಮ್ಮ ಮತ್ತು ಕೆಂಪಯ್ಯ ವಿದ್ಯಾರ್ಥಿ ಪುರಸ್ಕಾರ ಹಾಗೂ 2ನೇ ವರ್ಷದ ಇಂಡುವಾಳು ಎಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿ ಪ್ರದಾನ ಸಮಾರಂಭ ಆ.31ರಂದು ನಗರದಲ್ಲಿ ನಡೆಯಲಿದೆ ಎಂದು ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿ ಚಂದಗಾಲು ಲೋಕೇಶ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಜನದನಿ ಸಾಂಸ್ಕೃತಿಕ ಟ್ರಸ್ಟ್ , ಕರ್ನಾಟಕ ಸಂಘದಿಂದ ನಗರದ ಕೆವಿಎಸ್ ಶತಮಾನೋತ್ಸವ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವಮಾನವ ಕ್ಷೇತ್ರದ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ ಎಂದರು.

ಆದಿಚುಂಚನಗಿರಿ ವಿವಿ ವಿಶ್ರಾಂತ ಕುಲಪತಿ ಡಾ.ಎಂ.ಶೇಖರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಜಿ ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಇಂಡುವಾಳು ಎಚ್.ಹೊನ್ನಯ್ಯ ಅವರ ಪುತ್ರ ಹಾಗೂ ರೈತ ಹೋರಾಟಗಾರ ಎಚ್.ಚಂದ್ರಶೇಖರ್ ಉಪಸ್ಥಿತರಿರಲಿದ್ದಾರೆ ಎಂದರು.

ಬೆಂಗಳೂರಿನ ಗ್ಯಾಸ್ಟ್ರೋಎಂಟರಾಲಜಿ ಸೈನ್ಸಸ್ ಮತ್ತು ಅಂಗಾಗ ಕಸಿ ಸಂಸ್ಥೆ ಸ್ಥಾಪಕ ನಿರ್ದೇಶಕ ಡಾ.ಎನ್.ಎಸ್.ನಾಗೇಶ್‌ಗೆ ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ, ವಿದ್ಯಾರಣ್ಯಪುರಂನ ನೀಲಮ್ಮ ಅವರಿಗೆ ದೇವಮ್ಮ ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ ಹಾಗೂ ರಾಜ್ಯಮಟ್ಟದ ಕಬಡ್ಡಿ ಮಾಜಿ ಆಟಗಾರ ಹೆಚ್.ಕೆ.ಜಗದೀಶ್ ಚಂದ್ರ ಅವರಿಗೆ ಎಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

2024-25ನೇ ನೇ ಸಾಲಿನ ಎಸ್‌ಎಸ್‌ಎಲ್‌ಸಿಯಲ್ಲಿ ಬೇವಿನಹಳ್ಳಿ, ಇಂಡುವಾಳು ಹಾಗೂ ಹುಲ್ಕೆರೆ ಕೊಪ್ಪಲು ಗ್ರಾಮದ ಅತಿ ಹೆಚ್ಚು ಅಂಕಗಳಿಸಿದ 4 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಪ್ರಶಸ್ತಿ ಪುರಸ್ಕೃತರಿಗೆ ತಲಾ 25 ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ವಿದ್ಯಾರ್ಥಿ ಪುರಸ್ಕೃತರಿಗೆ ತಲಾ 5 ಸಾವಿರ ನಗದು ಮತ್ತು ಪ್ರಮಾಣ ಪತ್ರ ನೀಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಜನದನಿಯ ಸಂಸ್ಥಾಪಕ ಅಧ್ಯಕ್ಷ ಡಾ.ಜಯಪ್ರಕಾಶ್‌ಗೌಡ, ಅಧ್ಯಕ್ಷ ಕೆ.ಜಯರಾಂ, ಹೊನ್ನಪ್ಪ ಅವರ ಪುತ್ರ ಡಾ.ಆದರ್ಶ ಇದ್ದರು.