ಜೆಡಿಎಸ್ ನೂತನ ರಾಜ್ಯ ಕಾರ್ಯಾಧ್ಯಕ್ಷರಾಗಿ ರಾಜುಗೌಡ ಆಯ್ಕೆ

| Published : Feb 06 2024, 01:32 AM IST

ಸಾರಾಂಶ

ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಜೆಡಿಎಸ್ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಪತ್ರಿಕಾ ಪ್ರಕಟಣೆಯ್ಲಲಿ ತಿಳಿಸಿದ್ದಾರೆ.

ದೇವರಹಿಪ್ಪರಗಿ: ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಜೆಡಿಎಸ್ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಪತ್ರಿಕಾ ಪ್ರಕಟಣೆಯ್ಲಲಿ ತಿಳಿಸಿದ್ದಾರೆ. ಸೋಮವಾರದಂದು ಬೆಂಗಳೂರಿನ ಜೆ.ಪಿ.ಭವನದಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ರಾಜ್ಯದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ. ಅದರಲ್ಲೂ ನೂತನವಾಗಿ ಆಯ್ಕೆಯಾದ ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರನ್ನು ನೂತನ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ಉತ್ತರ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ. ಶಾಸಕರ ನೂತನ ರಾಜ್ಯ ಕಾರ್ಯಾಧ್ಯಕ್ಷರಾಗಿ ಆಯ್ಕೆ ಆಗಿದ್ದಕ್ಕೆ ಅಭಿನಂದನೆಗಳು ಮಹಾಪೂರವೇ ಹರಿದುಬರುತ್ತಿದೆ.