ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯೋತ್ಸವ

| Published : Dec 02 2024, 01:17 AM IST

ಸಾರಾಂಶ

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವುದು ತುಂಬಾ ಸಂತೋಷದ ವಿಷಯ ಹಾಗೂ ದೇಶ ವಿದೇಶಗಳಿಂದ ಆಗಮಿಸುವರಿಗೂ ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಪಸರಿಸುತ್ತಿರುವುದು ಇತರೆ ಸಂಸ್ಥೆಗಳಿಗೂ ಮಾದರಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದರು.

ಇಲ್ಲಿನ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಆಂಗ್ಲ ಭಾಷೆಗಿಂತ ಕನ್ನಡ ಭಾಷೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದು ಕರ್ನಾಟಕದ ಪರಂಪರೆಯನ್ನು ಜಾಗತಿಕವಾಗಿ ಪಸರಿಸಲು ಕಲಾ ಪ್ರದರ್ಶನ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಮಾನ ನಿಲ್ದಾಣದ ಹಣಕಾಸು ಅಧಿಕಾರಿ ಭಾಸ್ಕರ್‌ ಆನಂದರಾವ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್‌ ಹಾಗೂ ಮಾನವ ಸಂಪನ್ಮೂಲ ಅಧಿಕಾರಿ ನಳಿನಿ ಜಾರ್ಜ್‌ ಮತ್ತಿತರರು ಉಪಸ್ಥಿತರಿದ್ದರು.

(ಫೋಟೊ ಕ್ಯಾಫ್ಷನ್‌)

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರೊ. ಪುರುಷೋತ್ತಮ ಬಿಳಿಮಲೆ ಧ್ವಜಾರೋಹಣ ನೆರವೇರಿಸಿದರು. ಸಿಎಇ ಸತ್ಯಕಿ ರಘುನಾಥ್‌, ಬಿಐಎಎಲ್‌ನ ಅಧಿಕಾರಿ ಭಾಸ್ಕರ್‌ ಆನಂದರಾವ್‌, ನಳಿನಿ ಜಾರ್ಜ್‌ ಇತರರಿದ್ದರು.