ಸಿಂಪಾಡಿಪುರದ ವೀಣೆ ತಯಾರಿಕನಿಗೆ ರಾಜ್ಯೋತ್ಸವ ಪುರಸ್ಕಾರ

| Published : Oct 31 2025, 01:30 AM IST

ಸಿಂಪಾಡಿಪುರದ ವೀಣೆ ತಯಾರಿಕನಿಗೆ ರಾಜ್ಯೋತ್ಸವ ಪುರಸ್ಕಾರ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ಸಿಂಪಾಡಿಪುರ ಗ್ರಾಮದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರಿಗೆ 2025ನೇ ಸಾಲಿನ ಕರ್ನಾಟಕ ಸರ್ಕಾರದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ.

ದೊಡ್ಡಬಳ್ಳಾಪುರ: ತಾಲೂಕಿನ ಸಿಂಪಾಡಿಪುರ ಗ್ರಾಮದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರಿಗೆ 2025ನೇ ಸಾಲಿನ ಕರ್ನಾಟಕ ಸರ್ಕಾರದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ.

ತಾಲೂಕಿನ ಮಧುರೆ ಹೋಬಳಿಯ ಸಿಂಪಾಡಿಪುರ ಗ್ರಾಮದಲ್ಲಿ ವೀಣೆ ತಯಾರಿಕೆಯ ಪರಂಪರೆಯನ್ನು ಪ್ರಾರಂಭಿಸಿದ ಪೆನ್ನ ಓಬಳಯ್ಯ ಅವರು ವೀಣೆ ತಯಾರಕರಲ್ಲಿ ಕೆಲಸ ಮಾಡುತ್ತಾ ಕಲೆಯನ್ನು ಕಲಿತರು ಮತ್ತು ನಂತರ ತಮ್ಮ ಗ್ರಾಮ ಸಿಂಪಾಡಿಪುರ ಬಂದು ಈ ಕರಕುಶಲತೆಯನ್ನು ಗ್ರಾಮಸ್ಥರಿಗೆ ಕಲಿಸಿದರು. 50 ವರ್ಷಗಳಿಂದಲೂ ವೀಣೆ ತಯಾರಿಸುತ್ತಾ ಬಂದಿರುವ ಈ ಗ್ರಾಮವು ಈಗಲೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ.

ಮೈಸೂರು ವೀಣೆಗಳನ್ನು ಇಲ್ಲಿ ತಯಾರಿಸಲಾಗುತ್ತದೆ. ವೀಣೆ ತಯಾರಿಕೆಯ ಪರಂಪರೆಯನ್ನು ಮುಂದುವರಿಸಲು ಹೊಸ ತಲೆಮಾರಿನ ಪ್ರತಿಭೆಗಳು ಈ ಕರಕುಶಲತೆಯನ್ನು ಜೀವಂತವಾಗಿರಿಸಲು ಪ್ರಯತ್ನಿಸುತ್ತಿವೆ. ಸಿಂಪಾಡಿಪುರ ಗ್ರಾಮದಲ್ಲಿತ ಯಾರಾಗುವ ವೀಣೆಗಳು ಹೆಸರಾಂತ ಸಂಗೀತ ಕಲಾವಿದರ ಕೈಯಲ್ಲಿವೆ. ಸಾಮಾನ್ಯವಾಗಿ ವೀಣೆಗಳು ಸಿದ್ಧಗೊಳ್ಳುವುದು ತಮಿಳುನಾಡಿನ ತಂಜಾವೂರಿನಲ್ಲಿ, ನಂತರ ವೀಣೆ ತಯಾರಿಕೆಯಲ್ಲಿ ಗಮನ ಸೆಳೆದಿರುವುದು ಬೆಂಗಳೂರು ಬಳಿಯ ಸಿಂಪಾಡಿಪುರ ಗ್ರಾಮ. ಕಳೆದ ಐವತ್ತು ವರ್ಷಗಳಿಂದ, ಈ ಊರಿನಲ್ಲಿ ವೀಣೆ ಮತ್ತು ತಂಬೂರಿಗಳನ್ನು ತಯಾರು ಮಾಡುತ್ತಿದ್ದಾರೆ.

30ಕೆಡಿಬಿಪಿ2-

ವೀಣೆ ತಯಾರಕ ಪೆನ್ನ ಓಬಳಯ್ಯ.