ಸಾರಾಂಶ
ಶಾಲಾ ಮಕ್ಕಳ ಸಮ್ಮುಖದಲ್ಲಿ ಧ್ವಜಾರೋಹಣ, ಕನ್ನಡ ಭುವನೇಶ್ವರಿಗೆ ಪುಷ್ಪಾರ್ಪಣೆ ದೀಪ ಪ್ರಜ್ವಲನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿ ಭಾಷೆಯನ್ನು ಉಳಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದು ಮೂಲ್ಕಿ ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಹೇಳಿದರು.ಮೂಲ್ಕಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮೂಲ್ಕಿಯ ಕಾರ್ನಾಡ್ ಗಾಂಧಿ ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಶಾಲಾ ಮಕ್ಕಳ ಸಮ್ಮುಖದಲ್ಲಿ ಧ್ವಜಾರೋಹಣ, ಕನ್ನಡ ಭುವನೇಶ್ವರಿಗೆ ಪುಷ್ಪಾರ್ಪಣೆ ದೀಪ ಪ್ರಜ್ವಲನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಸದಸ್ಯರಾದ ಪುತ್ತು ಬಾವ, ಬಾಲಚಂದ್ರ ಕಾಮತ್, ಮೂಲ್ಕಿ ವಿಜಯ ಪದವಿ ಕಾಲೇಜು ಪ್ರಾಂಶುಪಾಲ ಪ್ರೊ. ವೆಂಕಟೇಶ್ ಭಟ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಪಮಿದಾ ಬೇಗಂ, ಐಕಳ ಪೊಂಪೈ ಕಾಲೇಜು ಪ್ರಾಂಶುಪಾಲ ಡೆಸ್ಮಂಡ್ ಡಿಮೆಲ್ಲೊ, ಮೂಲ್ಕಿ ತಾಲೂಕು ಉಪ ತಹಸೀಲ್ದಾರ್ ದಿಲೀಪ್ ರೋಡ್ಕರ್, ವಿಲ್ಮಾ ರಸ್ಕೀನಾ, ಕ್ಷೇತ್ರ ಸಮನ್ವಯಾಧಿಕಾರಿ ವೇದಾವತಿ, ಸಿಆರ್‌ಪಿಗಳಾದ ವಿವಿಲ್ಲಾ ,ರಾಮದಾಸ್ ಉಪಸ್ಥಿತರಿದ್ದರುಮೂಲ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ಸ್ವಾಗತಿಸಿದರು. ಅಮಿತಾ ನಿರೂಪಿಸಿದರು.