ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ: ರಾಜ್ಯದಲ್ಲಿ, ರಾಷ್ಟ್ರದಲ್ಲಿ ಹಾಗೂ ವಿದೇಶದಲ್ಲೂ ಇಂದು 69ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ, ಶ್ರದ್ಧೆ, ಭಕ್ತಿಯಿಂದ ಆಚರಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ನಮ್ಮ ಹಿರಿಯರು ಕರ್ನಾಟಕದ ಏಕಿಕರಣಕ್ಕಾಗಿ ಕೊಡುಗೆ ಕೊಟ್ಟಿದ್ದಾರೆ, ಅವರನ್ನು ಸ್ಮರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಕೈಗಾರಿಕಾ ಹಾಗೂ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಇಬ್ಬರು ಸಾಧಕರಿಗೆ ಪ್ರಶಸ್ತಿ ಲಭಿಸಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಎಲ್.ಎಚ್.ಬಿದರಿ ಹಾಗೂ ಜಾನಪದ ಕೇತ್ರದಲ್ಲಿ ಬಸವರಾಜ ಹಾರಿವಾಳ ಅವರಿಗೆ ಪ್ರಶಸ್ತಿ ಲಭಿಸಿದ್ದಾಗಿ ತಿಳಿಸಿದರು.ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಬಡವರ, ಶೋಷಿತರ ಪರವಾಗಿ ಅನೇಕ ೫ ಗ್ಯಾರಂಟಿ ಯೋಜನೆ ಜಾರಿಗೆ ತಂದು ಜನರಿಗೆ ಅನುಕೂಲ ಕಲ್ಪಿಸಿದೆ. ರಾಜ್ಯದಲ್ಲಿ ಅತ್ಯುತ್ತಮ ಆಡಳಿತವಿದ್ದು, ಸರ್ವ ಜನಾಂಗವನ್ನೂ ಸಮನಾಗಿ ಕಾಣುತ್ತ, ರಾಜ್ಯದ ಅಭಿವೃದ್ಧಿಗೆ ನಾವೆಲ್ಲರೂ ಪಣ ತೊಟ್ಟಿದ್ದೇವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್‌ಪಿ ಪ್ರಸನ್ನ ದೇಸಾಯಿ, ಸಿಇಒ ರಿಷಿ ಆನಂದ, ಎಡಿಸಿ ಸೋಮಲಿಂಗ ಗೆಣ್ಣೂರ ಉಪಸ್ಥಿತರಿದ್ದರು.