ಕನ್ನಡಪ್ರಭ ವಾರ್ತೆ ಜಮಖಂಡಿ ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಪೌರಕಾರ್ಮಿಕರಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಜಮಖಂಡಿ
ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಪೌರಕಾರ್ಮಿಕರಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ಸೂರ್ಯವಂಶಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ರಾಖಿ ಕಟ್ಟಿ, ಅವರ ಸೇವೆ ಗೌರವಿಸಲಾಯಿತು. ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಮಹತ್ವದ್ದಾಗಿದೆ ಎಂದು ಮಹಿಳಾ ಮೋರ್ಚಾ ಪದಾಧಿಕಾರಿಗಳು ಹೇಳಿದರು. ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ವಿಜಯಲಕ್ಷ್ಮೀ ತುಂಗಳ, ನಗರ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಕವಿತಾ ಲಗಳಿ, ಭಾರತಿ ಜಾಧವ, ಯಲ್ಲಮ್ಮ ಅರಕೇರಿ, ಚಂದ್ರವ್ವ ಜಮಖಂಡಿ ಸೇರಿದಂತೆ ಹಲವರು ಇದ್ದರು.