ರಕ್ಷಾರಾಮಯ್ಯ ಗೆಲುವಿಗೆ ಶ್ರಮಿಸಿ

| Published : Apr 13 2024, 01:01 AM IST

ಸಾರಾಂಶ

ದಾಬಸ್‌ಪೇಟೆ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯರನ್ನು ಗೆಲ್ಲಿಸಿ ನಾನು ಅವರೂ ಸೇರಿ ಜೋಡೆತ್ತಿನಂತೆ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ದಾಬಸ್‌ಪೇಟೆ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯರನ್ನು ಗೆಲ್ಲಿಸಿ ನಾನು ಅವರೂ ಸೇರಿ ಜೋಡೆತ್ತಿನಂತೆ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಕಾಂಗ್ರೆಸ್‌ ಸೇರ್ಪಡೆ ಹಾಗೂ ಗ್ರಾಪಂ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಮೆಚ್ಚಿ ಬೇರೆ ಬೇರೆ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಕಾಂಗ್ರೆಸ್ ಪಕ್ಷದ ಬಲವನ್ನು ಹೆಚ್ಚಿಸಿದೆ. ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಇಮ್ಮಡಿಯಾಗಿದೆ. ಅಭ್ಯರ್ಥಿ ಗೆಲುವಿಗೆ ಪ್ರತಿಯೊಬ್ಬರು ಕೈ ಜೋಡಿಸಿ ಕೆಲಸ ಮಾಡಬೇಕು ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸುಭದ್ರವಾಗಿ ನಡೆಯುತ್ತಿದೆ. ನುಡಿದಂತೆ ನಡೆಯುತ್ತಿರುವ ಸರ್ಕಾರವಾಗಿದ್ದು, ಗ್ಯಾರಂಟಿಗಳಿಂದ ಜನರಿಗೆ ಅನುಕೂಲವಾಗಿದೆ ಎಂದರು.

ಇದೇ ವೇಳೆ ವಿವಿಧ ಪಕ್ಷದ 14 ಗ್ರಾಪಂ ಸದಸ್ಯರು ಸೇರಿದಂತೆ ನೂರಕ್ಕೂ ಹೆಚ್ಚು ಮುಖಂಡರು ಜೆಡಿಎಸ್, ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.

ಮುಖಂಡ ಗೋವಿಂದರಾಜು, ಗ್ರಾಪಂ ಮಾಜಿ ಅಧ್ಯಕ್ಷ ಶಿವಕುಮಾರ್ ಮಾತನಾಡಿದರು. ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್, ವಕೀಲರಾದ ಹನುಮಂತೇಗೌಡ್ರು, ಮುಖಂಡರಾದ ನಯಾಜ್ ಖಾನ್, ಲಕ್ಕೂರು ಸಿದ್ದರಾಜು, ಹೊಸನಿಜಗಲ್ ಸಿದ್ದರಾಜು, ಬರಗೇನಹಳ್ಳಿ ನಾರಾಯಣ್, ಸುರೇಶ್, ಪಾರ್ಥಸಾರಥಿ, ದಿನೇಶ್ ನಾಯಕ್, ಖಲೀಂಉಲ್ಲಾ, ಬೆಂಕಿ ಮಹದೇವ್, ಯೋಗಾನಂದೀಶ್ ಇತರರಿದ್ದರು.ಪೋಟೋ 1 :

ದಾಬಸ್‌ಪೇಟೆಯಲ್ಲಿ ಗ್ರಾಪಂ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ವಿವಿಧ ಪಕ್ಷಗಳ ಗ್ರಾಪಂ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.