ಸಾರಾಂಶ
‘ಕನ್ನಡಪ್ರಭ’ ಪತ್ರಿಕೆಯಲ್ಲಿ ಜ.31 ರಂದು ‘ಭಗೀರಥ ಅಪ್ಪಿಯಣ್ಣನ ಹೋರಾಟಕ್ಕೆ ಜಯ ಸಿಕ್ಕೀತೇ?’ ಅಜೆಕಾರಿನ ಡೊಂಬರಪಲ್ಕೆಯ ಶ್ರೀನಿವಾಸ್ ಯಾನೆ ಅಪ್ಪಿಯಣ್ಣ ಅವರು ಕಳೆದ 50 ವರ್ಷಗಳಿಂದ ರಸ್ತೆ ದುರಸ್ತಿ ಮಾಡುವ ಸುದ್ದಿ ಪ್ರಕಟವಾಗಿತ್ತು. ಈ ಸುದ್ದಿಗೆ ತಾ.ಪಂ. ಸಿಇಒ, ತಹಸೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯ ಮರ್ಣೆ ಪಂಚಾಯಿತಿ ಸ್ಪಂದಿಸಿ ರಸ್ತೆ ದುರಸ್ತಿಗೊಳಿಸಿತ್ತು.
ಕನ್ನಡಪ್ರಭ ವಾರ್ತೆ ಕಾರ್ಕಳ
ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಕನ್ನಡಪ್ರಭ ವರದಿಗಾರ ರಾಮ್ ಅಜೆಕಾರ್ ಆಯ್ಕೆಯಾಗಿದ್ದಾರೆ.‘ಕನ್ನಡಪ್ರಭ’ ಪತ್ರಿಕೆಯಲ್ಲಿ ಜ.31 ರಂದು ‘ಭಗೀರಥ ಅಪ್ಪಿಯಣ್ಣನ ಹೋರಾಟಕ್ಕೆ ಜಯ ಸಿಕ್ಕೀತೇ?’ ಅಜೆಕಾರಿನ ಡೊಂಬರಪಲ್ಕೆಯ ಶ್ರೀನಿವಾಸ್ ಯಾನೆ ಅಪ್ಪಿಯಣ್ಣ ಅವರು ಕಳೆದ 50 ವರ್ಷಗಳಿಂದ ರಸ್ತೆ ದುರಸ್ತಿ ಮಾಡುವ ಸುದ್ದಿ ಪ್ರಕಟವಾಗಿತ್ತು. ಈ ಸುದ್ದಿಗೆ ತಾ.ಪಂ. ಸಿಇಒ, ತಹಸೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯ ಮರ್ಣೆ ಪಂಚಾಯಿತಿ ಸ್ಪಂದಿಸಿ ರಸ್ತೆ ದುರಸ್ತಿಗೊಳಿಸಿತ್ತು.
ಹಿರಿಯ ಉದ್ಯಮಿ ಹಾಗೂ ದಾನಶೂರ ಅಶ್ರಫ್ ಷಾ ಮಂತೂರು ಅವರ ದತ್ತಿನಿಧಿ ಪ್ರಶಸ್ತಿಯನ್ನು ಮೇ 3 ರಂದು ಸೀತಾಂಗೋಳಿಯ ಎಲೈನ್ಸ್ ಸಭಾಂಗಣದಲ್ಲಿ ಪ್ರದಾನ ಮಾಡಲಾಗುತ್ತಿದೆ. ಸ್ವಾಗತ ಸಮಿತಿಯ ಅಧ್ಯಕ್ಷ ಕೆ. ಕೆ. ಶೆಟ್ಟಿ ಕುತ್ತಿಕಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕೃಷಿ ಸಚಿವ ಚೆಲುವರಾಯಸ್ವಾಮಿ, ಅರಣ್ಯ ಸಚಿವ ಈಶ್ವರ ಖಂಡ್ರೆ, ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.