ಸಾರಾಂಶ
ರಾಮ ಮಂದಿರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಕೋಮುವಾದಿ ಬಿಜೆಪಿಯನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲಿಸಿ ಕಾಂಗ್ರೆಸ್ ಅನ್ನು ಕೆಂದ್ರದಲ್ಲಿ ಅಧಿಕಾರಕ್ಕೆ ತರುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡ ಮನವಿ ಮಾಡಿದರು.
ಚಿತದುರ್ಗ: ರಾಮ ಮಂದಿರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಕೋಮುವಾದಿ ಬಿಜೆಪಿಯನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲಿಸಿ ಕಾಂಗ್ರೆಸ್ ಅನ್ನು ಕೆಂದ್ರದಲ್ಲಿ ಅಧಿಕಾರಕ್ಕೆ ತರುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡ ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದವತಿಯಿಂದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಮಿಕರ ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ವರ್ಷಗಳ ಕಾಲ ದೇಶದಲ್ಲಿ ಅಧಿಕಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಕಾರ್ಮಿಕರ ಪರವಾಗಿರುವ ಕಾನೂನುಗಳನ್ನೆಲ್ಲಾ ರದ್ದುಪಡಿಸಿ ಬಡವರು, ರೈತರು, ಕಾರ್ಮಿಕರು, ಜನಸಾಮಾನ್ಯರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಗರೀಬಿ ಹಠಾವೋ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕಿದೆ. ಈ ನಿಟ್ಟಿನಲ್ಲಿ ಕಾರ್ಮಿಕ ವಿಭಾಗದ ಕಾರ್ಯಕರ್ತರು ಪ್ರತಿ ವಾರ್ಡ್ ಹಾಗೂ ಬೂತ್‌ಮಟ್ಟದಲ್ಲಿ ಮನೆಮನೆಗೆ ತೆರಳಿ ಕಾಂಗ್ರೆಸ್ ಕಾರ್ಯಕ್ರಮಗಳನ್ನು ಜನತೆಗೆ ತಿಳಿಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಬಹುಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು.ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾವಿರ ಸುಳ್ಳು ಹೇಳಿದ್ದಾರೆ. ಅದಾನಿ, ಅಂಬಾನಿ ಸೇರಿದಂತೆ ಉದ್ಯಮಿಗಳ 167 ಲಕ್ಷ ಕೋಟಿ ರು. ಸಾಲ ಮನ್ನಾ ಮಾಡಿರುವ ಬಿಜೆಪಿಗೆ ದೆಹಲಿಯಲ್ಲಿ ಚಳುವಳಿ ನಡೆಸುತ್ತಿರುವ ರೈತರ ಸಮಸ್ಯೆಗಳು ಕಣ್ಣಿಗೆ ಕಾಣುತ್ತಿಲ್ಲವೆ ಎಂದು ಪುಟ್ಟಸ್ವಾಮಿ ಗೌಡ ಪ್ರಶ್ನಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಮಿಕ ವಿಭಾಗದ ಅಧ್ಯಕ್ಷ ಚೋಟು ಸೇರಿದಂತೆ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.