ಸೋಮವಾರಪೇಟೆಯಲ್ಲಿ ರಾಮನವಮಿ ಆಚರಣೆ

| Published : Apr 09 2025, 12:30 AM IST

ಸಾರಾಂಶ

ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಶ್ರೀ ರಾಮನವಮಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಭಾನುವಾರ ಶ್ರೀರಾಮ ನವಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಆಂಜನೇಯ ದೇವಾಲಯ ಮತ್ತು ಕುರುಹಿನ ಶೆಟ್ಟಿ ಸಮಾಜದ ಶ್ರೀ ರಾಮಮಂದಿರದಲ್ಲಿ ಬೆಳಗ್ಗಿನಿಂದ ವಿಶೇಷ ಪೂಜೆಗಳ ನಡೆದವು. ಆಂಜನೇಯ ದೇವಾಲಯದಲ್ಲಿ ಭಕ್ತರಿಗೆ ಕೋಸಂಬರಿ, ಪಾನಕ ಹಾಗೂ ಮಜ್ಜಿಗೆ ವಿತರಿಸಲಾಯಿತು. ಶ್ರೀ ರಾಮ ಉತ್ಸವ ಸಮಿತಿ ವತಿಯಿಂದ ಜ್ಞಾನ ವಿಕಾಸ ಶಾಲೆಯಲ್ಲಿ ಬೆಳಗ್ಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿಯ ಊಟದ ವ್ಯವಸ್ಥೆ ಮಾಡಲಾಗಿತ್ತು.

ಸಂಜೆ ಹಲವೆಡೆಗಳಿಂದ ಆಗಮಿಸಿದ್ದ 8 ವಿದ್ಯುತ್ ದೀಪಗಳಿಂದ ಅಲಂಕೃತ ಮಂಟಪಗಳ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನಡೆಯಿತು. ಮೆರವಣಿಗೆ ಸಂದರ್ಭ ಸ್ಥಳೀಯ ವಾದ್ಯ ತಂಡಗಳು, ಮೈಸೂರು ತಮಟೆ, ನಾಸಿಕ್ ಬ್ಯಾಂಡ್, ವೀರಗಾಸೆ ನೃತ್ಯ, ವಿವಿಧ ವೇಷ ಕುಣಿತಗಳು ಮೆರವಣಿಗೆಯಲ್ಲಿ ಗಮನ ಸೆಳೆಯಿತು.