ಸಾರಾಂಶ
ಭದ್ರಾವತಿಯಲ್ಲಿ ಕರ್ನಾಟಕ ದಲಿತ ನೌಕರರ ಒಕ್ಕೂಟ ತಾಲ್ಲೂಕು ಶಾಖೆ ವತಿಯಿಂದ ಮಾತೆ ರಮಾಬಾಯಿ ಅಂಬೇಡ್ಕರ್ ಮತ್ತು ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಭದ್ರಾವತಿ
ಕರ್ನಾಟಕ ದಲಿತ ನೌಕರರ ಒಕ್ಕೂಟ ತಾಲ್ಲೂಕು ಶಾಖೆ ವತಿಯಿಂದ ನಗರದ ಬಿ.ಎಚ್.ರಸ್ತೆ, ಕಾಂಚನ ಹೋಟೆಲ್ ಸಭಾಂಗಣದಲ್ಲಿ ಮಾತೆ ರಮಾಬಾಯಿ ಅಂಬೇಡ್ಕರ್ ಮತ್ತು ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷೆ ಲತಾ ಚಂದ್ರ ಶೇಖರ್ ಉದ್ಘಾಟಿಸಿದರು. ಕರ್ನಾಟಕ ದಲಿತ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಗಂಗಾಧರ ಮೂರ್ತಿ. ಸಿ. ಕೆ.ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚಿನ್ನಯ್ಯ, ಸಾವಿತ್ರಿಬಾಯಿ ಫುಲೆಯವರ ಕುರಿತು ಮಾತನಾಡಿದರು. ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಬುದ್ಧವಂದನೆ ಸಲ್ಲಿಸಿದರು. ದಲಿತ ನೌಕರರ ಒಕ್ಕೂಟದ ತಾಲ್ಲೂಕು ಅಧ್ಯಕ್ಷೆ ಎಸ್.ಉಮಾ ಮಾತೆ ರಮಾಬಾಯಿಯವರ ಕುರಿತು ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ಸಮಾಜ ಕಲ್ಯಾಣಾಧಿಕಾರಿ ಗೋಪಾಲಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ, ಡಾ.ವರ್ಷ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಧರಗೌಡ, ಕ. ದ. ಸಂ. ಸಮಿತಿ ಮುಖಂಡರಾದ ರಂಗನಾಥ, ಶಾಂತಮ್ಮ, ಈಶ್ವರಪ್ಪ, ಕಾಣಿಕ್ಯರಾಜ್, ಮಣಿ, ದಲಿತ ನೌಕರರ ಒಕ್ಕೂಟದ ಪದಾಧಿಕಾರಿಗಳಾದ ಈಶ್ವರಪ್ಪ, ಹಾಲೇಶಪ್ಪ, ಲೋಕೇಶ್. ಸುಜಾತ, ಮಂಜುಳಮ್ಮ,ಗಂಗನರಸಯ್ಯ, ಶಶಿಕುಮಾರ್, ಅಂಜನಮೂರ್ತಿ, ನಂಜುಂಡಸ್ವಾಮಿ, ನಾಗರಾಜ್, ರಂಗನಾಥ ಮೊರಾರ್ಜಿ ಸೇರಿದಂತೆ ಹಲವರು ಮುಖಂಡರು ಹಾಜರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 15ಜನ ಮಹಿಳಾ ನೌಕರರನ್ನು ಗುರುತಿಸಿ ಗೌರವಿಸಲಾಯಿತು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))