ಚಕ್ರಬಾವಿ ಡೈರಿ ಅಧ್ಯಕ್ಷರಾಗಿ ರಾಮಚಂದ್ರು ಅವಿರೋಧ ಆಯ್ಕೆ

| Published : Oct 07 2025, 01:02 AM IST

ಚಕ್ರಬಾವಿ ಡೈರಿ ಅಧ್ಯಕ್ಷರಾಗಿ ರಾಮಚಂದ್ರು ಅವಿರೋಧ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಮಾಗಡಿ: ತಾಲೂಕಿನ ಚಕ್ರಬಾವಿ ಹಾಲು ಉತ್ಪದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಮಚಂದ್ರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಉಮೇಶ್ ತಿಳಿಸಿದ್ದಾರೆ.

ಮಾಗಡಿ: ತಾಲೂಕಿನ ಚಕ್ರಬಾವಿ ಹಾಲು ಉತ್ಪದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಮಚಂದ್ರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಉಮೇಶ್ ತಿಳಿಸಿದ್ದಾರೆ.

ಅಧ್ಯಕ್ಷ ಚುನಾವಣೆಯಲ್ಲಿ ರಾಮಚಂದ್ರು ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಕಾರಣ ಚುನಾವಣಾಧಿಕಾರಿ ಮುಂದಿನ ಅವಧಿಯ ಅಧ್ಯಕ್ಷರನ್ನು ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಬಮೂಲ್ ನಿರ್ದೇಶಕ ಎಚ್.ಎನ್.ಅಶೋಕ್ ಮಾತನಾಡಿ, ಸಹಕಾರ ಸಂಘದಲ್ಲಿ ವಿದ್ಯಾವಂತರು ಅಧಿಕಾರದಲ್ಲಿದ್ದರೆ ಸಹಕಾರ ಸಂಘದಲ್ಲಿ ಸಿಗುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸುತ್ತಾರೆ. ನೂತನ ಅಧ್ಯಕ್ಷ ರಾಮಚಂದ್ರು ನಿವೃತ್ತ ರೇಷ್ಮೆ ಅಧಿಕಾರಿಯಾಗಿರುವುದು ಮತ್ತೊಂದು ಹೆಗ್ಗಳಿಕೆ. ತಾಲೂಕಿನಲ್ಲಿ ಚಕ್ರಬಾವಿ ಹಾಲು ಉತ್ಪಾದಕರ ಸಹಕಾರ ಸಂಘ ಗುಣಮಟ್ಟದ ಹಾಲನ್ನು ಪೂರೈಸುವ ಸಂಘ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ನೂತನ ಅಧ್ಯಕ್ಷರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿ ಎಂದು ಹಾರೈಸಿದರು.

ನೂತನ ಅಧ್ಯಕ್ಷ ರಾಮಚಂದ್ರು ಮಾತನಾಡಿ, ಶಾಸಕ ಬಾಲಕೃಷ್ಣ, ಬಮೂಲ್ ನಿರ್ದೇಶಕ ಎಚ್.ಎನ್.ಅಶೋಕ್ ಹಾಗೂ ನಿರ್ದೇಶಕರ ಸಹಕಾರದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ರೈತರಿಗೆ ಸಿಗಬೇಕಾದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸುತ್ತೇನೆ ಎಂದು ತಿಳಿಸಿದರು.

ಇದೇ ವೇಳೆ ಸಂಘದ ನಿರ್ದೇಶಕ ಮಹೇಶ್, ಭೈರಪ್ಪ, ಅಂಗಡಿ ಸ್ವಾಮಿ, ರಾಮಣ್ಣ, ಚಂದ್ರ, ಸಂಘದ ಸಿಇಒ ನರಸಿಂಹಮೂರ್ತಿ ಇತರರು ಭಾಗವಹಿಸಿದ್ದರು.

(ಫೋಟೋ ಕ್ಯಾಪ್ಷನ್‌)

ಮಾಗಡಿ ತಾಲೂಕಿನ ಚಕ್ರಬಾವಿ ಹಾಲು ಉತ್ಪದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಮಚಂದ್ರು ಅವಿರೋಧವಾಗಿ ಆಯ್ಕೆಯಾದರು.