ಸಾರಾಂಶ
ರಾಮದುರ್ಗ: ನವೀಲುತೀರ್ಥ ಅಣೆಕಟ್ಟಿನಿಂದ ಮಲಪ್ರಭಾ ನದಿಗೆ ಐದು ಸಾವಿರ ಕ್ಯುಸೆಕ್ ನೀರು ಹರಿಬಿಟ್ಟರುವ ಪರಿಣಾಮ ರಾಮದುರ್ಗ ಪಟ್ಟಣದ ವೆಂಕಟೇಶ್ವರ ದೇವಸ್ಥಾನದ ಹತ್ತಿರ ಇರುವ ಹಳೆಯ ಸೇತುವೆ ಮುಳಗಡೆಯಾಗಿದೆ.
ರಾಮದುರ್ಗ: ನವೀಲುತೀರ್ಥ ಆಣೆಕಟ್ಟಿನಿಂದ ಮಲಪ್ರಭಾ ನದಿಗೆ ಐದು ಸಾವಿರ ಕ್ಯುಸೆಕ್ ನೀರು ಹರಿಬಿಟ್ಟರುವ ಪರಿಣಾಮ ರಾಮದುರ್ಗ ಪಟ್ಟಣದ ವೆಂಕಟೇಶ್ವರ ದೇವಸ್ಥಾನದ ಹತ್ತಿರ ಇರುವ ಹಳೆಯ ಸೇತುವೆ ಮುಳಗಡೆಯಾಗಿದೆ.
ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿದ್ದು, ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಆದರೂ ಕೆಲ ವಾಹನ ಸವಾರರು ಮತ್ತು ಶಾಲಾ ವಾಹನಗಳು ಹರಿಯುವ ನೀರಿನಲ್ಲಿ ವಾಹನ ಚಲಾಯಿಸಿಕೊಂಡು ಹೋಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.