ರಾಮಕೃಷ್ಣ ದೊಡ್ಡಮನಿ ಕಾಂಗ್ರೆಸ್ ಮರು ಸೇರ್ಪಡೆ

| Published : Mar 30 2024, 12:48 AM IST

ಸಾರಾಂಶ

2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ಕಣಿಕ್ಕಿಳಿದಿದ್ದರು. ಇವರ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ ಸೋಲು ಅನುಭವಿಸಿದ್ದರು

ಗದಗ: ಶಿರಹಟ್ಟಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಶುಕ್ರವಾರ ಸಂಜೆ ಗದಗ ತಾಲೂಕಿನ ಹುಲಕೋಟಿಯ ಕೆವಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾಂಗ್ರೆಸ್ ಪಕ್ಷದ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದ ಕಾನೂನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಶಾಸಕ ಜಿ.ಎಸ್.ಪಾಟೀಲ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು.

2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ಕಣಿಕ್ಕಿಳಿದಿದ್ದರು. ಇವರ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ ಸೋಲು ಅನುಭವಿಸಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಕಾಂಗ್ರೆಸ್ ರಾಮಕೃಷ್ಣ ದೊಡ್ಡಮನಿ ಅವರನ್ನು ಪಕ್ಷದಿಂದ ಉಚ್ಚಾಟಿಸಿತು.

ವಿಧಾನಸಭೆ ಚುನಾವಣೆಯಲ್ಲಿ 45 ಸಾವಿರ ಮತ ಪಡೆದು ಎರಡನೇ ಸ್ಥಾನ ಪಡೆದಿದ್ದರು. ರಾಮಕೃಷ್ಣ ಅವರ ಶಕ್ತಿಯನ್ನರಿತ ಕಾಂಗ್ರೆಸ್ ಅವರನ್ನು ಮರು ಸೇರ್ಪಡೆ ಮಾಡಿಕೊಳ್ಳುವ ಮೂಲಕ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಬಲ ತಂದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮರಳಿ ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್ ನಲ್ಲಿಯೇ ಮೊದಲು ತೀವ್ರ ವಿರೋಧ ವ್ಯಕ್ತವಾಗಿತ್ತು.‌ ಅದನ್ನು ಸೂಕ್ಷ್ಮವಾಗಿ ತಿಳಿಗೊಳಿಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.