ರಾಮಕೃಷ್ಣ ಮಿಷನ್ - ಸ್ವಚ್ಛ ಮಂಗಳೂರು ಅಭಿಯಾನದ ಸೆಪ್ಟೆಂಬರ್ ತಿಂಗಳ ಮಾಸಿಕ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಕ್ಕೆ ಕದ್ರಿ ಮಲ್ಲಿಕಟ್ಟೆಯ ಕೇಂದ್ರ ಗ್ರಂಥಾಲಯ ಉದ್ಯಾನವನದಲ್ಲಿ ಎಂ.ಆರ್.ಪಿ.ಎಲ್-ಒಎನ್‌ಜಿಸಿ ಸಂಸ್ಥೆಯ ಜನರಲ್ ಮ್ಯಾನೇಜರ್ ಮಂದಾರ್ ಕಾಲೆ ಹಾಗೂ ಬಿಳಿಗಿರಿ ರಂಗನಾಥಸ್ವಾಮಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿಕಲಾ ಚಾಲನೆ ನೀಡಿದರು.
ಮಂಗಳೂರು: ರಾಮಕೃಷ್ಣ ಮಿಷನ್ - ಸ್ವಚ್ಛ ಮಂಗಳೂರು ಅಭಿಯಾನದ ಸೆಪ್ಟೆಂಬರ್ ತಿಂಗಳ ಮಾಸಿಕ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಕ್ಕೆ ಕದ್ರಿ ಮಲ್ಲಿಕಟ್ಟೆಯ ಕೇಂದ್ರ ಗ್ರಂಥಾಲಯ ಉದ್ಯಾನವನದಲ್ಲಿ ಎಂ.ಆರ್.ಪಿ.ಎಲ್-ಒಎನ್‌ಜಿಸಿ ಸಂಸ್ಥೆಯ ಜನರಲ್ ಮ್ಯಾನೇಜರ್ ಮಂದಾರ್ ಕಾಲೆ ಹಾಗೂ ಬಿಳಿಗಿರಿ ರಂಗನಾಥಸ್ವಾಮಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿಕಲಾ ಚಾಲನೆ ನೀಡಿದರು.ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಪ್ರೊಫೆಷನಲ್ ಎಜುಕೇಶನ್‌ನ ಪ್ರಾಂಶುಪಾಲ ಡಾ.ಜ್ಞಾನೇಶ್ವರ ಪೈ ಮಾರೂರ್, ಭಾರತೀಯ ಸೇನೆಯ ನಿವೃತ್ತ ಯೋಧರಾದ ಗೋಪಿನಾಥ ರಾವ್, ಸತ್ಯನಾರಾಯಣ ಕೆ.ವಿ., ದಿಲ್‌ರಾಜ್ ಆಳ್ವ ಮತ್ತಿತರರು ಇದ್ದರು.ಹಿರಿಯ ಸ್ವಯಂಸೇವಕರಾದ ಕಮಲಾಕ್ಷ ಪೈ, ಸುಕುಮಾರ್ ಸಾಲ್ಯಾನ್, ದಾಮೋದರ ಭಟ್, ಅನಿರುದ್ಧ ನಾಯಕ್, ಸಚಿನ್ ಶೆಟ್ಟಿ ಮಾರ್ಗದರ್ಶನದಲ್ಲಿ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಪ್ರೊಫೆಷನಲ್ ಎಜುಕೇಶನ್‌ನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕೇಂದ್ರ ಗ್ರಂಥಾಲಯದ ಹೊರಭಾಗ ಮತ್ತು ಕಾಲುದಾರಿಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು.
ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿಯ ಅಧ್ಯಾಪಕ ರಾಹುಲ್ ಭಟ್ ಜೋಯಲ್ ಲೋಬೋ ನೇತೃತ್ವದಲ್ಲಿ ವಿದ್ಯಾರ್ಥಿಗಳು ಉದ್ಯಾನವನದ ಒಳಭಾಗವನ್ನು ಸ್ವಚ್ಛಗೊಳಿಸಿದರು. ಹಿರಿಯ ಸ್ವಯಂಸೇವಕರಾದ ಅವಿನಾಶ್, ಪ್ರೊ.ಪ್ರಕಾಶ್, ನವನೀತ್ ಶೆಟ್ಟಿ, ಪ್ರಜ್ವಲ್, ಪ್ರಥಮ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕದ್ರಿ ಗೋಪಾಲನಾಥ್ ಸ್ಮಾರಕದ ಸ್ವಚ್ಛತೆ ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಏವಿಯೇಷನ್‌ನ ವಿದ್ಯಾರ್ಥಿಗಳು ಹಿರಿಯಸ್ವಯಂಸೇವಕರಾದ ತಾರಾನಾಥ ಆಳ್ವ, ಬಾಲಕೃಷ್ಣ ಭಟ್ ಹಾಗೂ ನಾಗೇಂದ್ರ ಮಾರ್ಗದರ್ಶನದಲ್ಲಿ ಉದ್ಯಾನವನದಲ್ಲಿರುವ ಸಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಸ್ಮಾರಕವನ್ನು ಸ್ವಚ್ಛಗೊಳಿಸಿದರು.