ಸತ್ತೇಗಾಲದಿಂದ ಮಾಗಡಿಯ 44 ಕೆರೆಗಳಿಗೆ ನೀರುಮಾಗಡಿ: ಮಾಗಡಿಗೆ ಶ್ರೀರಂಗ ಕುಡಿಯುವ ನೀರಿನ ಯೋಜನೆ ನೀಡಿದ್ದು, ಕಾಂಗ್ರೆಸ್ ಸರ್ಕಾರ. ಈಗ ಸತ್ತೇಗಾಲದಿಂದ ಕ್ಷೇತ್ರದ 44 ಕೆರೆಗಳಿಗೆ ಕಾವೇರಿ ನೀರು ತುಂಬಿಸುವ ಯೋಜನೆ, 159 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ, ಮಂಚನಬೆಲೆ ಅಣೆಕಟ್ಟು ಕೆಳಭಾಗದ ಅಭಿವೃದ್ಧಿಗೆ 13 ಕೋಟಿ, ರಸ್ತೆ, ಚರಂಡಿ ಅಭಿವೃದ್ಧಿ ಸೇರಿದಂತೆ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ 100 ಕೋಟಿಗೂ ಅಧಿಕ ಅನುದಾನ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.