ಕೈಗಾರಿಕೆಗಳ ತ್ಯಾಜ್ಯದಿಂದ ಕೆರೆಗಳ ನೀರು ಮಲಿನಹಾರೋಹಳ್ಳಿ: ಕೈಗಾರಿಕಾ ಪ್ರದೇಶಗಳ ತ್ಯಾಜ್ಯದಿಂದಾಗಿ ಹಾರೋಹಳ್ಳಿ ಸುತ್ತಮುತ್ತಲಿನ ಕೆರೆಗಳು ಕಲುಷಿತಗೊಳ್ಳುತ್ತಿದ್ದು, ಜನ ಸಾಮಾನ್ಯರಲ್ಲಿ ಆತಂಕ ಹೆಚ್ಚಿಸಿದೆ. ಹಾರೋಹಳ್ಳಿ ಪಟ್ಟಣದ ಸಮೀಪದ, ಏಷ್ಯಾದಲ್ಲಿಯೇ ಎರಡನೇ ಸ್ಥಾನದಲ್ಲಿರುವ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 500 ಕ್ಕೂ ಹೆಚ್ಚು ಕಾರ್ಖಾನೆಗಳನ್ನು ಹೊಂದಿದ್ದು, ಈ ಪ್ರದೇಶದ ತ್ಯಾಜ್ಯಗಳು ಹಳ್ಳಕೊಳ್ಳಗಳ ಮೂಲಕ ಹರಿದು ಕೆರೆ ಒಡಲು ಸೇರುತ್ತಿದೆ.