ಜಿಲ್ಲೆಯಲ್ಲಿ ಒತ್ತುವರಿ ತೆರವಿಗೆ ಅಗತ್ಯ ಕ್ರಮ ವಹಿಸಿರಾಮನಗರ: ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳ ಒತ್ತುವರಿ, ಅನಧಿಕೃತ ಲೇಔಟ್ ಗಳ ನಿರ್ಮಾಣವನ್ನು ಗುರುತಿಸಿ ಅವುಗಳ ತೆರವಿಗೆ ಕಾನೂನು ಪ್ರಕಾರ ಅಗತ್ಯ ಕ್ರಮ ವಹಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೂ (ವಿಪತ್ತು ನಿರ್ವಹಣೆ, ನೋಂದಣಿ ಮತ್ತು ಮುದ್ರಾಂಕ ಹಾಗೂ ಸಾಮಾಜಿಕ ಭದ್ರತೆ) ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.