ಸಿಪಿವೈ ಪರ ಡಿಸಿಎಂ ಬಿರುಸಿನ ಪ್ರಚಾರಚನ್ನಪಟ್ಟಣ: ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಬಿರುಸಿನ ಪ್ರಚಾರ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಸ್ವಗ್ರಾಮ ಚಕ್ಕೆರೆ, ಹೊನ್ನಾಯಕನಹಳ್ಳಿ, ನಾಗವಾರ, ಮಾಕಳಿ, ಮೈಲನಾಯಕನಹಳ್ಳಿ, ರಾಂಪುರ, ನಗರದ ಕೋಟೆ ಮಾರಮ್ಮನ ದೇವಸ್ಥಾನದ ಬಳಿ ಮಂಗಳವಾರಪೇಟೆಯ ಬಸವನಗುಡಿ ಹಾಗೂ ರಾಜಾಕೆಂಪೇಗೌಡ ಬಡಾವಣೆಯಲ್ಲಿ ಕಾಂಗ್ರೆಸ್ ಸಭೆಯಲ್ಲಿ ಭಾಗಿಯಾಗುವ ಮೂಲಕ ಬಿರುಸಿನ ಪ್ರಚಾರ ನಡೆಸಿದರು.