ಜೆಡಿಎಸ್ ಹಣದ ಹೊಳೆ ಈ ಬಾರಿ ಕೆಲಸ ಮಾಡೋದಿಲ್ಲಚನ್ನಪಟ್ಟಣ: ಈ ಬಾರಿ ಉಪಚುನಾವಣೆಯಲ್ಲಿ ಜೆಡಿಎಸ್ನ ಹಣದ ಹೊಳೆ ಕೆಲಸ ಮಾಡುವುದಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಏಳು ಮಂದಿ ಶಾಸಕರಿದ್ದರು, ಅವರು ಎಷ್ಟೇ ಹಣದ ಹೊಳೆ ಹರಿಸಿದರೂ, ಅಧಿಕಾರದ ಪ್ರಭಾವ ಬೀರಿದರೂ ನಿಖಿಲ್ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ಇಲ್ಲೂ ಆಗುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.