ದಲಿತರ ದುಡ್ಡು ದೋಚಿದ ಕಾಂಗ್ರೆಸ್ ಸರ್ಕಾರ: ಅನ್ನದಾನಿಚನ್ನಪಟ್ಟಣ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರು. ಹಣ, ಎಸ್ಇಪಿ ಮತ್ತು ಟಿಎಸ್ಪಿ ಅನುದಾನವನ್ನೇ ದೋಚಿದ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ದಲಿತ ಸಮುದಾಯದ ಮತಗಳನ್ನು ಕೇಳುವ ನೈತಿಕ ಹಕ್ಕಿಲ್ಲ. ನೀಚ ಕಾಂಗ್ರೆಸ್ಸಿಗರಿಗೆ ದಲಿತ ಕೇರಿಗಳಿಗೆ ಪ್ರವೇಶಿಸುವ ಯೋಗ್ಯತೆಯೂ ಇಲ್ಲ ಎಂದು ಪ್ರದೇಶ ಜೆಡಿಎಸ್ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಹರಿಹಾಯ್ದರು.