ಕಿತ್ತೂರು ಹೋರಾಟದ ಅಮರ ಚರಿತ್ರೆ ಅನನ್ಯ: ಪಿ.ಗೋವಿಂದರಾಜು ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ, 200 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಿತ್ತೂರು ರಾಣಿ ಚೆನ್ನಮ್ಮ ವಿಜಯಯಾತ್ರೆ ನಡೆಯುತ್ತಿದೆ. 1824 ಅಕ್ಟೋಬರ್ 23 ಕಿತ್ತೂರು ರಾಣಿ ಚೆನ್ನಮ್ಮ ಸೈನ್ಯದೊಂದಿಗೆ ಕಿತ್ತೂರು ಕೋಟೆಯ ಹೊರಗೆ ಈಸ್ಟ್ ಇಂಡಿಯಾ ಕಂಪನಿಯ ಸೈನಿಕರನ್ನು ಸೋಲಿಸಿದ ದಿನವಾಗಿದೆ. ಇದು ಬ್ರಿಟಿಷರ ವಿರುದ್ದ ಮೊದಲ ಮಹಿಳಾ ಹೋರಾಟಗಾರ್ತಿಗೆ ದೊರೆತ ವಿಜಯವಾಗಿದೆ .