ಹಾರೋಹಳ್ಳಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆಸುಮಾರು 8ರಿಂದ 10 ಕೋಟಿ ರು.ಗಳ ವೆಚ್ಚದಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಸ್ತೆ ಚರಂಡಿ ಹಾಗೂ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಇದರ ಜೊತೆಯಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ದ್ಯಾವಸಂದ್ರ, ಭೀಮಸಂದ್ರ, ತಿಮ್ಮಸಂದ್ರ ಸೇರಿದಂತೆ ಕೆಲವು ಹಳ್ಳಿಗಳು ಸೇರಿಕೊಂಡಿದ್ದು ಇದಕ್ಕಾಗಿ 33 ಕೋಟಿ ರು. ಅನುದಾನ ಕೂಡ ಬಿಡುಗಡೆಯಾಗಿದೆ.