ತೆಂಗು ಉತ್ಪಾದನೆಯಲ್ಲಿ 1ನೇ ಸ್ಥಾನಕ್ಕೆ ಬರಲು ಶ್ರಮಿಸಿರಾಮನಗರ: ತೆಂಗು ಉತ್ಪಾದನೆಯಲ್ಲಿ ಭಾರತ 3ನೇ ಸ್ಥಾನದಲ್ಲಿದ್ದು, ಮೊದಲ ಸ್ಥಾನಕ್ಕೆ ಬರಲು ನಾವೆಲ್ಲರೂ ಶ್ರಮಿಸಬೇಕಿದೆ. ಇದಕ್ಕಾಗಿ ತೆಂಗು ಅಭಿವೃದ್ಧಿ ಮಂಡಳಿ ತೆಂಗು ಉತ್ಪಾದನೆ ಸಾಮರ್ಥ್ಯ ಹೆಚ್ಚಿಸಲು ರೂಪಿಸಿರುವ ಕಾರ್ಯಕ್ರಮಗಳನ್ನು ಬೆಳೆಗಾರರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವ ರಾಮ್ ನಾಥ್ ಠಾಕೂರ್ ಕಿವಿಮಾತು ಹೇಳಿದರು.