ಡಿಸಿ ಕಚೇರಿ ಬಳಿ ಪ್ರತಿಭಟನೆ ನಿಷೇಧ ಹಿಂಪಡೆಯಿರಿರಾಮನಗರ: ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸುತ್ತಲಿನ ಪ್ರದೇಶದಲ್ಲಿ ಪ್ರತಿಭಟನೆ, ಧರಣಿ, ಸತ್ಯಾಗ್ರಹ ನಡೆಸದಂತೆ ಜಿಲ್ಲಾಧಿಕಾರಿ ಹೊರಡಿಸಿರುವ ನಿಷೇಧಾಜ್ಞೆ ಆದೇಶವನ್ನು ಹಿಂಪಡೆಯುವಂತೆ ಹಾಗೂ ರೈತರ ೩೨ ಬೇಡಿಕೆಗಳನ್ನು ಈಡೇರಿಸುವಂತೆ ರೈತಸಂಘ, ಕನ್ನಡಪರ ಸಂಘಟನೆ ಹಾಗೂ ದಲಿತಪರ ಸಂಘಟನೆಗಳ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.