ಯಾವುದೇ ಗಡಿ ಮಿತಿಯಿಲ್ಲದೇ ಆ್ಯಂಬುಲೆನ್ಸ್ ಸಂಚಾರಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ಸಕ್ರಿಯತೆಯಿಂದ ಕಾರ್ಯನಿರ್ವಹಿಸಬೇಕಿದ್ದು, ರಾತ್ರಿಯ ವೇಳೆ ಆ್ಯಂಬುಲೆನ್ಸ್ ಸೇವೆ ಸಮರ್ಪಕವಾಗಿರಬೇಕು. ತಮಿಳುನಾಡಿನ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಪ್ರದೇಶಗಳಿಗೆ ಸೇವೆ ದೊರಕುತ್ತಿಲ್ಲ ಎಂಬುದು ತಿಳಿದುಬಂದಿದ್ದು, ಅದಕ್ಕಾಗಿ ಸಿಎಸ್ಆರ್ ನಿಧಿಯಲ್ಲಿ 4 ಆ್ಯಂಬುಲೆನ್ಸ್ ಗಳನ್ನು ಮೂರು ತಿಂಗಳಿನೊಳಗೆ ಒದಗಿಸಲಾಗುವುದು ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಹೇಳಿದರು.