ಪ್ರತಿಭಟನೆ ನಿರ್ಬಂಧ ಆದೇಶ ಹಿಂಪಡೆತಕ್ಕೆ 24 ಗಂಟೆ ಗಡುವು ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಪ್ರತಿಭಟನೆಗೆ ನಿರ್ಬಂಧ ಹೇರಿರುವ ಆದೇಶವನ್ನು ಜಿಲ್ಲಾಧಿಕಾರಿಗಳು 24ಗಂಟೆಯೊಳಗೆ ಹಿಂಪಡೆದುಕೊಳ್ಳಬೇಕು. ಇಲ್ಲದಿದ್ದರೆ ಸೆ.9ರಂದು ಕನ್ನಡ, ದಲಿತ, ರೈತ ಸೇರಿದಂತೆ ಹಲವು ಸಂಘಟನೆಗಳು ಸೇರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.