ಎಲ್ಲರೂ ಉದ್ಯೋಗ ಮೇಳ ಸದ್ಬಳಕೆ ಮಾಡಿಕೊಳ್ಳಿಕನ್ನಡಪ್ರಭ ವಾರ್ತೆ ರಾಮನಗರ ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ.30ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಓ ಮೇಳದಲ್ಲಿ ಸಾವಿರಾರು ಉದ್ಯೋಗವಕಾಶಗಳು ಲಭ್ಯವಿದ್ದು, ಜಿಲ್ಲೆಯ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಕರೆ ನೀಡಿದರು.