ಕೆರೆಗಳಿಗೆ ನೀರು ಹರಿಸುವಂತೆ ಕಕಜವೇ ಆಗ್ರಹಚನ್ನಪಟ್ಟಣ: ಕೆಆರ್ಎಸ್ನಿಂದ ಶಿಂಷಾ ನದಿಗೆ ನೀರು ಹರಿಸಲು ಅನುಮತಿ ಇದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಇದರಿಂದಾಗಿ ಜಿಲ್ಲೆಯ ಕೆರೆಕಟ್ಟೆಗಳು ನೀರಿಲ್ಲದೆ ಬರಿದಾಗಿದೆ. ಈ ಕೂಡಲೇ ಕೆಆರ್ಎಸ್ನಿಂದ ಶಿಂಷಾ ನದಿಗೆ ನೀರು ಹರಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.