ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗೆಲುವು ಸಾಧಿಸಿದ್ದು, ಇದು ಅವರ ರಾಜಕೀಯ ಜೀವನದಲ್ಲಿ ಆರನೇ ಗೆಲುವಾಗಿದೆ. ಸತತ ಎರಡು ಸೋಲಿನಿಂದ ಕಂಗೆಟ್ಟಿದ್ದ ಸೈನಿಕ ಕೈಹಿಡಿದು ಗೆಲುವಿನ ಲಹರಿಗೆ ಮರಳಿದ್ದಾರೆ.
ಕಾಂಗ್ರೆಸ್ ಪಕ್ಷ ರಾಮನಗರ ಜಿಲ್ಲೆಯಲ್ಲಿ ಹೊಸ ದಾಖಲೆ ಬರೆದಿದೆ. ದಳಪತಿಗಳ ಪಾಲಿಗೆ ದಶಕಗಳಿಂದಲೂ ರಾಮನಗರ ಜಿಲ್ಲೆ ಜೆಡಿಎಸ್ ನ ಭದ್ರಕೋಟೆಯಾಗಿಯೇ ಉಳಿದಿತ್ತು. ಆದರೀಗ ಕೈ ಪಾಳಯ ಹಂತಹಂತವಾಗಿ ಜೆಡಿಎಸ್ ಭದ್ರಕೋಟೆಯನ್ನು ಚಿದ್ರಗೊಳಿಸಿ ಕಾಂಗ್ರೆಸ್ ಬಾವುಟ ಹಾರಿಸುವಲ್ಲಿ ಯಶಸ್ವಿಯಾಗಿದೆ.