ತಹಸೀಲ್ದಾರ್ ಸಮ್ಮುಖದಲ್ಲಿ ದೇವಸ್ಥಾನ ಪ್ರವೇಶ ಮಾಡಿದ ದಲಿತರುತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ಗ್ರಾಮದಲ್ಲಿ ಪುರಾತನ ವೇಯಿಗಣ್ಣಮ್ಮ ದೇವಾಲಯವಿದ್ದು, ಕಳೆದ ಕೆಲವು ವರ್ಷಗಳ ಹಿಂದೆ ಊರಿನ ಸರ್ವರೂ ಸೇರಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ್ದಾರೆ. ಆದರೆ, ಇಂದಿಗೂ ಈ ದೇವಾಲಯಕ್ಕೆ ದಲಿತರಿಗೆ ಪ್ರವೇಶ ಇರಲಿಲ್ಲ, ದೇಗುಲದ ಆರ್ಚಕ ಬಚ್ಚೇಗೌಡ, ದಲಿತರು ದೇವಾಲಯ ಪ್ರವೇಶಿಸದಂತೆ ನಿಂದನಾತ್ಮಕವಾಗಿ ಹೀಯಾಳಿಸಿದ ಬಗ್ಗೆ ದೂರು ಕೇಳಿ ಬಂದಿತ್ತು.