ಬೇಡಿಕೆಗಳ ಈಡೇರಿಕೆಗೆ ರೈತ ಸಂಘ ಒತ್ತಾಯಚನ್ನಪಟ್ಟಣ: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಬಿತ್ತನೆ ಬೀಜದ ಕೊರತೆ, ಕೃಷಿ ಕೊಳವೆ ಬಾವಿಗಳ ವಿದ್ಯುತ್ ಸಂಪರ್ಕಕ್ಕೆ ವಿಧಿಸುತ್ತಿರುವ ದುಬಾರಿ ಶುಲ್ಕ, ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ, ಭ್ರಷ್ಟಾಚಾರ ತಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕು ರೈತರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆ ನಡೆಸಿದರು.