ಕೆಂಗಲ್‌ನಿಂದ ಹೊಸ ರಾಜಕೀಯ ಅಧ್ಯಾಯ ಪ್ರಾರಂಭಚನ್ನಪಟ್ಟಣ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನನ್ನ ತಮ್ಮನ ಸೋಲಾಗಿದೆ. ನಾವು ಮಾಡಿದ ತಪ್ಪಿನಿಂದ ಸೋಲಾಗಿದ್ದು, ಇದನ್ನು ಸ್ವೀಕರಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಮತ ನೀಡಿದ ಚನ್ನಪಟ್ಟಣದ ಮತದಾರಿಗೆ ಕೋಟಿ ನಮನಗಳು. ರಾಮನ ಭಂಟ ಹನುಮಂತ. ಇಂದು ಇಲ್ಲಿನ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಿಂದ ನನ್ನ ರಾಜಕೀಯದ ಹೊಸ ಅಧ್ಯಾಯ ಪ್ರಾರಂಭ ಮಾಡಲು ಬಂದಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾರ್ಮಿಕವಾಗಿ ನುಡಿದರು.