ರಕ್ತಪಾತವಾದರೆ ರಾಜ್ಯ ಸರ್ಕಾರವೇ ಹೊಣೆ: ಎ.ಮಂಜುನಾಥ್ರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂಲಕ ನಿರ್ಮಿಸಲು ಹೊರಟಿರುವ ಬಿಡದಿ ಟೌನ್ ಶಿಪ್ ಯೋಜನೆಗೆ ರೈತರ ತೀವ್ರ ವಿರೋಧವಿದೆ. ಇದನ್ನೂ ಲೆಕ್ಕಿಸದೆ ಯೋಜನೆ ಜಾರಿಗೊಳಿಸಿದರೆ ಮುಂದಾಗುವ ರಕ್ತಪಾತಕ್ಕೆ ರಾಜ್ಯ ಸರ್ಕಾರವೇ ಹೊಣೆ ಆಗಬೇಕಾಗುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಎ.ಮಂಜುನಾಥ್ ಎಚ್ಚರಿಕೆ ನೀಡಿದರು.