ಪ್ರಜ್ಞಾವಂತ ಪದವೀಧರರು ಬೆಂಬಲಿಸುವ ವಿಶ್ವಾಸಚನ್ನಪಟ್ಟಣ: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿ, ನಿರುದ್ಯೋಗಿ ಯುವಜನರಿಗೆ ಉದ್ಯೋಗಾವಕಾಶ, ಅತಿಥಿ ಶಿಕ್ಷಕರು, ಉಪನ್ಯಾಸಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಈ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, ಪ್ರಜ್ಞಾವಂತ ಪದವೀಧರ ಮತದಾರರು ಬೆಂಬಲಿಸುವ ವಿಶ್ವಾಸವಿದೆ ಎಂದು ಬೆಂಗಳೂರು ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಆರ್.ಎಸ್.ಉದಯ್ ಸಿಂಗ್ ತಿಳಿಸಿದರು.