ಹೆಚ್ಚಿದ ಬಿಸಿಲಿನ ತಾಪ : ಪ್ರಾಣಿ, ಪಕ್ಷಿಗಳಿಗೂ ನೀರಿನ ಹಾಹಾಕಾರದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ಮುಟ್ಟಿದೆ. ಬಿಸಿಲಿನ ದಾಹ ನೀಗಿಸಿಕೊಳ್ಳಲು ಜನರು ಎಳನೀರು, ತಂಪು ಪಾನೀಯ, ಕಲ್ಲಂಗಡಿ, ಐಸ್ ಕ್ರೀಮ್ ಮೊರೆ ಹೋಗುತ್ತಿದ್ದಾರೆ. ಮೂಕಜೀವಿಗಳ ನೋವು ಕೇಳವವರಿಲ್ಲ. ಪ್ರಜ್ಞಾವಂತ ನಾಗರಿಕರು ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯಕ್ಕೆ ಮುಂದಾಗಬೇಕಾಗಿದೆ.