ಸಭೆಗೆ ಗೈರಾದ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷರಿಂದ ನೋಟಿಸ್ಹೊನ್ನಿಗನಹಳ್ಳಿ ಗ್ರಾಮ ಪಂಚಾಯತಿಯ ಕೆ.ಡಿ.ಪಿ. ಸಭೆಯು ಗ್ರಾಪಂ ಅಧ್ಯಕ್ಷೆ ಪುಟ್ಟತಾಯಮ್ಮ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾದ ಸಿದ್ದಮ್ಮ ಹಾಗೂ ಗ್ರಾಮ ಪಂಚಾಯಿತಿಯ ಎಲ್ಲಾ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ರೇಷ್ಮೆ, ಪಶು ವೈದ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ, ಶಿಕ್ಷಣ, ಆರೋಗ್ಯ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.