ಜನರಿಗೆ ಒಳಿತಾಗುವುದನ್ನು ಸಹಿಸದ ಬಿಜೆಪಿ-ಜೆಡಿಎಸ್: ಸುರೇಶ್ನಾನು ಈ ಜಿಲ್ಲೆಯ ಮಗ, ಅವರು ಹಾಸನದಿಂದ ಬಂದಿದ್ದಾರೆ. ಚುನಾವಣೆಗೆ ನಿಲ್ಲಿಸಲು ಇಲ್ಲಿನ ಕಾರ್ಯಕರ್ತರು ಇರಲಿಲ್ಲವೇ. ಇವರು ಬಂದ ಮೇಲೆ ಯಾವ ಕಾರ್ಯಕರ್ತರಿಗೆ ಅವಕಾಶ ನೀಡಿದ್ದಾರೆ. ಇವರ ಕುಟುಂಬದವರು ಬಿಟ್ಟು, ಯಾರೂ ಬದುಕುವ ಹಾಗಿಲ್ಲ. ಮಗ ಆಯಿತು, ಸೊಸೆ ಆಯಿತು, ಮೊಮ್ಮಗ ಆಯಿತು ಈಗ ಅಳಿಯನನ್ನು ನಿಲ್ಲಿಸಿದ್ದಾರೆ. ಇಲ್ಲಿ ಯಾರು ಇರಲಿಲ್ಲವೇ? ಈ ಕುರಿತು ನೀವು ಚಿಂತನೆ ಮಾಡಬೇಕು.