ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ: ನ್ಯಾ. ಸವಿತಾರಾಮನಗರ: ಮಕ್ಕಳು ಎದುರಿಸುವ ಮಾನಸಿಕ ಒತ್ತಡಗಳ ಲಕ್ಷಣಗಳನ್ನು ಆರಂಭದಲ್ಲಿಯೇ ಗುರುತಿಸಿ, ಯಾವುದೇ ಸಮಸ್ಯೆಗಳಿಗೆ ಪರಿಹಾರ ಇದ್ದೇ ಇರುತ್ತದೆ ಎಂಬ ಆತ್ಮವಿಶ್ವಾಸವನ್ನು ತುಂಬಬೇಕು. ಆ ಮೂಲಕ ಆತ್ಮಹತ್ಯೆಯಂತಹ ಯತ್ನಗಳಿಗೆ ಪ್ರಯತ್ನಿಸುವುದನ್ನು ತಪ್ಪಿಸಬಹುದಾಗಿದೆ. ಇದಕ್ಕಾಗಿ ಪೋಷಕರು ಸದಾ ಜಾಗೃತರಾಗಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಸವಿತಾ ಕರೆ ನೀಡಿದರು.