ಇಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನರಾಮನಗರ: 7ನೇ ವೇತನ ಜಾರಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆ.27ರಂದು ಬೆಂಗಳೂರಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಜಿಲ್ಲೆಯ ಸರ್ಕಾರಿ ಇಲಾಖೆಗಳ ವೃಂದವಾರು ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರು ಸ್ವಯಂ ಪ್ರೇರಿತವಾಗಿ ಭಾಗಿಯಾಗುವ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ತಿಳಿಸಿದರು.